ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ: ವಿಡಿಯೋ ನೋಡಿ

Edited By:

Updated on: Dec 14, 2025 | 4:14 PM

ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯೋರ್ವನಿಗೆ ಸ್ಥಳೀಯರು ಹಿಗ್ಗಾಮುಗ್ಗ ಥಳಿಸಿರೋ ಘಟನೆ ಹುಬ್ಬಳ್ಳಿ ನಗರದ ಈಶ್ವರ ನಗರದಲ್ಲಿ ನಡೆದಿದೆ. ನಿನ್ನೆ ಸಂಜೆ ಬಡಾವಣೆಗೆ ಆಗಮಿಸಿದ್ದ ಓರ್ವ ವ್ಯಕ್ತಿ, ಬಡಾವಣೆಯ ಮಹಿಳೆಯರಿಗೆ ಚುಡಾಯಿಸುವದು, ಅಸಭ್ಯವಾಗಿ ವರ್ತಿಸುತ್ತಿದ್ದನಂತೆ. ಇದನ್ನು ಗಮನಿಸಿದ ಸ್ಥಳೀಯರು, ವಿಕೃತ ಕ್ರಿಮಿಯನ್ನು ಕಂಬಕ್ಕೆ ಕಟ್ಟಿ, ಚಪ್ಪಲಿಯಿಂದ ಹೊಡೆದಿದ್ದಾರೆ. ಮುಖ ಮುಸುಡಿ ನೋಡದೆ, ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆದ್ರೆ ಈ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೇ, ನಂತರ ಬಿಟ್ಟು ಕಳುಹಿಸಿದ್ದಾರೆ.

ಹುಬ್ಬಳ್ಳಿ, (ಡಿಸೆಂಬರ್ 14):ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯೋರ್ವನಿಗೆ ಸ್ಥಳೀಯರು ಹಿಗ್ಗಾಮುಗ್ಗ ಥಳಿಸಿರೋ ಘಟನೆ ಹುಬ್ಬಳ್ಳಿ ನಗರದ ಈಶ್ವರ ನಗರದಲ್ಲಿ ನಡೆದಿದೆ. ನಿನ್ನೆ ಸಂಜೆ ಬಡಾವಣೆಗೆ ಆಗಮಿಸಿದ್ದ ಓರ್ವ ವ್ಯಕ್ತಿ, ಬಡಾವಣೆಯ ಮಹಿಳೆಯರಿಗೆ ಚುಡಾಯಿಸುವದು, ಅಸಭ್ಯವಾಗಿ ವರ್ತಿಸುತ್ತಿದ್ದನಂತೆ. ಇದನ್ನು ಗಮನಿಸಿದ ಸ್ಥಳೀಯರು, ವಿಕೃತ ಕ್ರಿಮಿಯನ್ನು ಕಂಬಕ್ಕೆ ಕಟ್ಟಿ, ಚಪ್ಪಲಿಯಿಂದ ಹೊಡೆದಿದ್ದಾರೆ. ಮುಖ ಮುಸುಡಿ ನೋಡದೆ, ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆದ್ರೆ ಈ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ನೀಡದೇ, ನಂತರ ಬಿಟ್ಟು ಕಳುಹಿಸಿದ್ದಾರೆ.

Published on: Dec 14, 2025 04:13 PM
Loading...
Unable to load recommendations.
Follow Us
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More