ಮಾಲ್​ ಆಫ್​ ಏಷ್ಯಾಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ: ಪೊಲೀಸ್ ಕಮಿಷನರ್ ಬಿ ದಯಾನಂದ ಭೇಟಿ

ಮಾಲ್​ ಆಫ್​ ಏಷ್ಯಾಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ: ಪೊಲೀಸ್ ಕಮಿಷನರ್ ಬಿ ದಯಾನಂದ ಭೇಟಿ

ರಾಚಪ್ಪಾಜಿ ನಾಯ್ಕ್
| Updated By: ಗಂಗಾಧರ​ ಬ. ಸಾಬೋಜಿ

Updated on:Jan 01, 2024 | 10:57 PM

ಮಾಲ್​ ಆಫ್​ ಏಷ್ಯಾಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ ವಿಚಾರವಾಗಿ ಸೋಮವಾರ ಮಾಲ್​ಗೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಪೊಲೀಸ್ ಕಮಿಷನರ್ ಬಿ.ದಯಾನಂದ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಟ್ರಾಫಿಕ್ ಸಮಸ್ಯೆ ಹಿನ್ನಲೆಯಲ್ಲಿ ಮಾಲ್ ಆಫ್ ಏಷ್ಯಾ ವಿರುದ್ಧ 2023 ಡಿಸೆಂಬರ್  31ರಿಂದ 2024ರ ಜನವರಿ 15ರವರೆಗೆ ಮಾಲ್‌ಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸುವಂತೆ ಪೊಲೀಸರು ನಿರ್ದೇಶಿಸಿದ್ದರು.

ಬೆಂಗಳೂರು, ಜನವರಿ 01: ಮಾಲ್​ ಆಫ್​ ಏಷ್ಯಾಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ ವಿಚಾರವಾಗಿ ಸೋಮವಾರ ಮಾಲ್​ಗೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಪೊಲೀಸ್ ಕಮಿಷನರ್ ಬಿ.ದಯಾನಂದ (B Dayananda) ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಟ್ರಾಫಿಕ್ ಸಮಸ್ಯೆ ಹಿನ್ನಲೆಯಲ್ಲಿ ಮಾಲ್ ಆಫ್ ಏಷ್ಯಾ ವಿರುದ್ಧ 2023 ಡಿಸೆಂಬರ್  31ರಿಂದ 2024ರ ಜನವರಿ 15ರವರೆಗೆ ಮಾಲ್‌ಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸುವಂತೆ ಪೊಲೀಸರು ನಿರ್ದೇಶಿಸಿದ್ದರು. ಹೀಗಾಗಿ ಸಾರ್ವಜನಿಕ ನಿರ್ಭಂದ ಕ್ರಮ ಎದುರಿಸಿದ್ದ ಮಾಲ್‌ ಆಫ್‌ ಏಷ್ಯಾ ಹೈ ಕೋರ್ಟ್ ನಲ್ಲಿ ಪ್ರಶ್ನಿಸಿತ್ತು. ಆ ಹಿನ್ನಲೆಯಲ್ಲಿ ಮಾಲ್ ಪರ ವಕೀಲರ  ಭರವಸೆ ದಾಖಲಿಸಿಕೊಂಡ ಹೈಕೋರ್ಟ್, ಮುಂದಿನ ವಿಚಾರಣೆವರೆಗೂ ಅದರ ವಿರುದ್ದ ಕ್ರಮಕ್ಕೆ ಮುಂದಾಗದಂತೆ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದ ಹಿನ್ನಲೆಯಲ್ಲಿ ಮಾಲ್ ಆಫ್ ಏಷ್ಯಾ ಓಪನ್ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Jan 01, 2024 10:56 PM