ಪೆಟ್ರೋಲ್​​, ಡೀಸೆಲ್ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿ ಜನ ಏನಂತಾರೆ ನೋಡಿ!

Updated on: May 15, 2026 | 9:32 AM

Petrol and Diesel Price Hike: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೆ ಬೆಂಗಳೂರು ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನರಿಗೆ ಈಗ ಇಂಧನ ದರ ಏರಿಕೆ ಮತ್ತೊಂದು ದೊಡ್ಡ ಹೊರೆಯಾಗಿ ಪರಿಣಮಿಸಿದೆ. ಇದರಿಂದಾಗಿ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಭೀತಿ ಉಂಟಾಗಿದೆ.

ಬೆಂಗಳೂರು, ಮೇ 15: ಪೆಟ್ರೋಲ್ ಮತ್ತು ಡೀಸೆಲ್ ದರ ದಿಢೀರ್ ಏರಿಕೆಯಾಗಿರುವುದು ಬೆಂಗಳೂರಿನ ಜನರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಿ ಲೀಟರ್ ಪೆಟ್ರೋಲ್‌ಗೆ 3.27 ರೂಪಾಯಿ ಹಾಗೂ ಡೀಸೆಲ್‌ಗೆ 3.12 ರೂಪಾಯಿ ಹೆಚ್ಚಳವಾಗಿದ್ದು, ಬೆಳಗ್ಗೆಯೇ ಪೆಟ್ರೋಲ್ ಬಂಕ್‌ಗಳಿಗೆ ಬಂದ ಸವಾರರು ಬೆಲೆ ಏರಿಕೆ ಕಂಡು ಕಂಗಾಲಾಗಿದ್ದಾರೆ. ಡೀಸೆಲ್ ದರ ಏರಿಕೆಯಿಂದಾಗಿ ಸರಕು ಸಾಗಣೆ ವೆಚ್ಚ ಹೆಚ್ಚಾಗಲಿದ್ದು, ಇದರ ನೇರ ಪರಿಣಾಮ ದಿನಸಿ ಮತ್ತು ತರಕಾರಿ ಬೆಲೆಗಳ ಮೇಲೆ ಬೀಳಲಿದೆ ಎಂದು ಸಾರ್ವಜನಿಕರು ಕಳವಳ ವ್ಯಕ್ತಪಡಿಸಿದ್ದಾರೆ. ‘ಟಿವಿ9’ ಬಳಿ ಅಳಲು ತೋಡಿಕೊಂಡ ಬೆಂಗಳೂರಿಗರು, ಈಗಾಗಲೇ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ನಮಗೆ ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಕಿಡಿಕಾರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More