ಮೈಸೂರಿನ ಉದಯಗಿರಿಯಲ್ಲಿ ಮತ್ತೆ ಝಳಪಿಸಿದ ಲಾಂಗ್, ಮಚ್ಚುಗಳು: ಭಯಾನಕ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆ
ಮೈಸೂರಿನ ಉದಯಗಿರಿಯಲ್ಲಿ ಮತ್ತೆ ಲಾಂಗು ಮಚ್ಚುಗಳು ಝಳಪಿಸಿವೆ. ಘಟನೆ ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಎರಡು ಗುಂಪುಗಳ ನಡುವಿನ ಗಲಾಟೆ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕರು ಲಾಂಗು ಮಚ್ಚುಗಳನ್ನು ಹಿಡಿದು ಓಡಾಡಿದ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸರಿಯಾಗಿದ್ದು, ಇದೀಗ ವೈರಲಾಗುತ್ತಿದೆ.
ಮೈಸೂರು, ಜನವರಿ 19: ಮೈಸೂರಿನ ಉದಯಗಿರಿಯಲ್ಲಿ ಕಳೆದ ವರ್ಷ ಸಂಭವಿಸಿದ್ದ ಗಲಭೆ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಪೊಲೀಸ್ ಠಾಣೆ ಮೇಲೆಯೇ ದುಷ್ಕರ್ಮಿಗಳು ಕಲ್ಲುತೂರಾಟ ನಡೆಸಿದ್ದರು. ಇದೀಗ ಅದೇ ಉದಯಗಿರಿಯಲ್ಲಿ ಮತ್ತೆ ಸಾರ್ವಜನಿಕವಾಗಿ ಲಾಂಗ್, ಮಚ್ಚುಗಳು ಝಳಪಿಸಿವೆ. ಮೈಸೂರಿನ ಅಬುಜರ್ ಮಸೀದಿ ಸಮೀಪದ ಪಾರ್ಕಿನಲ್ಲಿ ಉದಯಗಿರಿಯ ಶಕಿಬುಲ್ ರೆಹಮಾನ್ ಅಲಿಯಾಸ್ ಟಿಪ್ಪು, ಇಮ್ರಾನ್, ಆಸೀಫ್, ಅಜಾಂ, ಅಜೀಜ್ ಎಂಬವರ ನಡುವೆ ಕ್ರಿಕೆಟ್ ಆಟದ ವಿಚಾರವಾಗಿ ಮಾರಾಮಾರಿ ನಡೆದಿದ್ದು, ಲಾಂಗು ಮಚ್ಚುಗಳನ್ನು ಹಿಡಿದುಕೊಂಡು ಸಾರ್ವಜನಿಕವಾಗಿ ಓಡಾಡಿದ್ದಾರೆ. ಇದು ಸಾರ್ವಜನಿಕರಲ್ಲಿ ಭೀತಿಗೆ ಕಾರಣವಾಗಿದೆ. ಭಾನುವಾರ ನಡೆದ ಈ ಘಟನೆಯ ದೃಶ್ಯ ಮೊಬೈಲ್ ಕ್ಯಾಮರಾಗಳಲ್ಲಿ ಸರಿಯಾಗಿದೆ. ಘಟನೆ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow Us
Latest Videos
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್ಪೋರ್ಟ್ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
