ವಿದ್ಯಾರ್ಥಿಗಳೊಂದಿಗೆ ಪ್ರವಾಸಕ್ಕೆ ಬಂದ ಶಿಕ್ಷನಿಗೆ ತರಾಟೆಗೆ ತೆಗೆದುಕೊಂಡ ಸ್ಥಳಿಯರು
ವಿದ್ಯಾರ್ಥಿಗಳನ್ನು ಕರೆದುಕೊಂಡು ಪ್ರವಾಸಕ್ಕೆ ಬಂದ ಶಿಕ್ಷನಿಗೆ ಸ್ಥಳಿಯರು ತರಾಟೆಗೆ ತೆಗೆದುಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.
ಉಡುಪಿ: ಇಂದು ಚಿತ್ರದುರ್ಗದ ಶಾಲೆಯೊಂದರ ಶಿಕ್ಷಕ ವಿದ್ಯಾರ್ಥಿಗಳನ್ನು ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಪ್ರವಾಸಕ್ಕೆಂದು ಕರೆದುಕೊಂಡು ಬಂದಿದ್ದನು. ವಿದ್ಯಾರ್ಥಿಗಳು ದೇವರ ದರ್ಶನ ಪಡೆದುಕೊಂಡು ಮರಳಿ ಬಸ್ ಹತ್ತಲು ತಡವಾಗಿದೆ. ಇದರಿಂದ ಕ್ರೋದಗೊಂಡ ಶಿಕ್ಷಕ ವಿದ್ಯಾರ್ಥಿಗಳಿಗೆ ಬೆತ್ತದಿಂದ ಹೊಡೆದಿದ್ದಾನೆ. ಇದನ್ನು ಕಂಡ ಪ್ರವಾಸಿಗರು ಶಿಕ್ಷಕನಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಶಿಕ್ಷಕ ಪ್ರವಾಸಿಗರಿಗೆ ಬಾಯಿಗೆ ಬಂದ ಹಾಗೆ ಬೈದಿದ್ದಾನೆ. ಇನ್ನೂ ಶಿಕ್ಷಕನ ಈ ವರ್ತನೆಯನ್ನು ಸರೆ ಹಿಡಿದ ಪ್ರವಾಸಿಗರು, ಈತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಜಾಲಾತಾಣದಲ್ಲಿ ಮನವಿ ಮಾಡಿದ್ದಾರೆ.
Published on: Nov 27, 2022 08:08 PM
Latest Videos