AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಮಗಾರಿ ವೀಕ್ಷಣೆಗೆ ಬಂದಿದ್ದ ವಿಠ್ಠಲ್ ಹಲಗೇಕರ್​​​ಗೆ ಜನರಿಂದ ಕ್ಲಾಸ್: ಕಕ್ಕಾಬಿಕ್ಕಿಯಾದ ಬಿಜೆಪಿ ಶಾಸಕ

ಕಾಮಗಾರಿ ವೀಕ್ಷಣೆಗೆ ಬಂದಿದ್ದ ವಿಠ್ಠಲ್ ಹಲಗೇಕರ್​​​ಗೆ ಜನರಿಂದ ಕ್ಲಾಸ್: ಕಕ್ಕಾಬಿಕ್ಕಿಯಾದ ಬಿಜೆಪಿ ಶಾಸಕ

ಸಹದೇವ್​ ಮಾನೆ
| Edited By: |

Updated on: Oct 25, 2026 | 8:52 PM

Share

ಮುಖ್ಯಾಂಶಗಳು

  • ಬಿಜೆಪಿ ಶಾಸಕ ವಿಠ್ಠಲ್ ಹಲಗೇಕರ್​ಗೆ ಇಟಗಿ ಗ್ರಾಮಸ್ಥರ ತರಾಟೆ
  • ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಇಟಗಿ ಗ್ರಾಮಸ್ಥರ ತರಾಟೆ
  • ಜನರು ಸಮಸ್ಯೆಯಲ್ಲಿದ್ದಾಗ ಬರದ ನೀವು ಈಗ್ಯಾಕೆ ಬಂದಿದ್ದೀರಿ?

ಬೆಳಗಾವಿಯಲ್ಲಿ ಕಾಮಗಾರಿ ವೀಕ್ಷಣೆಗೆ ಬಂದಿದ್ದ ಬಿಜೆಪಿ ಶಾಸಕ ವಿಠ್ಠಲ್ ಹಲಗೇಕರ್ ಅವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ರಸ್ತೆ ಸಮಸ್ಯೆಗಾಗಿ ಪ್ರತಿಭಟನೆ ನಡೆಸುತ್ತಿದ್ದಾಗ ಬಾರದ ಶಾಸಕರು ಈಗ ಏಕೆ ಬಂದರು ಎಂದು ಪ್ರಶ್ನಿಸಿದರು. ಗ್ರಾಮಸ್ಥರ ಪ್ರಶ್ನೆಗೆ ಉತ್ತರಿಸಲಾಗದೆ ಶಾಸಕರು ಕಕ್ಕಾಬಿಕ್ಕಿಯಾದರು. ಗ್ರಾಮಸ್ಥರು ಶಾಸಕರ ಕಾರು ತಡೆದು ಧಿಕ್ಕಾರ ಕೂಗಿದರು.

ಬೆಳಗಾವಿ, ಅಕ್ಟೋಬರ್​ 25: ‘ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾಗ ನೀವು ಬರಲಿಲ್ಲ, ಈಗ ಕಾಮಗಾರಿ ವೀಕ್ಷಣೆಗೆ ಬಂದಿದ್ದೀರಿ. ಜನರು ಸಮಸ್ಯೆಯಲ್ಲಿದ್ದಾಗ ಬರದ ನೀವು ಈಗ್ಯಾಕೆ ಬಂದಿದ್ದೀರಿ’ ಎಂದು ಬಿಜೆಪಿ ಶಾಸಕ ವಿಠ್ಠಲ್ ಹಲಗೇಕರ್​ಗೆ ಗ್ರಾಮಸ್ಥರು ತರಾಟೆ ತೆಗೆದುಕೊಂಡು ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಇಟಗಿಯಲ್ಲಿ ನಡೆದಿದೆ. ಶಾಸಕ ವಿಠ್ಠಲ್ ಹಲಗೇಕರ್ ಕಾಮಗಾರಿ ವೀಕ್ಷಣೆಗೆ ಬಂದಿದ್ದರು. ಈ ವೇಳೆ ಅವರ ಕಾರು ತಡೆದಿದ್ದಾರೆ. ಸುಳ್ಳು ಭರವಸೆ ನೀಡುವ ಶಾಸಕರಿಗೆ ಧಿಕ್ಕಾರ ಎಂದು ಘೋಷಣೆ ಕೂಗಿದ್ದಾರೆ. ಶಾಸಕರ ಬೆಂಬಲಿಗರು ಮತ್ತು ಇಟಗಿ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ಉಂಟಾಗಿದೆ. ಜನಾಕ್ರೋಶಕ್ಕೆ ಬೆದರಿದ ಶಾಸಕರು ಟವೆಲ್​ನಿಂದ ಬೆವರು ಒರೆಸಿಕೊಂಡಿದ್ದಾರೆ. ಬಳಿಕ ಗ್ರಾಮಸ್ಥರ ಮನವೊಲಿಸಿ ಸ್ಥಳದಿಂದ ತೆರಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸಹದೇವ್​ ಮಾನೆ
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More