AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್ ಬಂಕ್‌ನಲ್ಲಿ ಹೊತ್ತಿ ಉರಿದ ಪಲ್ಸರ್ ಬೈಕ್; ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ದುರಂತ!

ಪೆಟ್ರೋಲ್ ಬಂಕ್‌ನಲ್ಲಿ ಹೊತ್ತಿ ಉರಿದ ಪಲ್ಸರ್ ಬೈಕ್; ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ದುರಂತ!

ಭೀಮೇಶ್​​ ಪೂಜಾರ್
| Edited By: |

Updated on:Oct 28, 2026 | 11:59 AM

Share

ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ಪೆಟ್ರೋಲ್ ಬಂಕ್‌ನಲ್ಲಿ ಪಲ್ಸರ್ ಬೈಕ್‌ಗೆ ಇಂಧನ ತುಂಬಿಸಿದ ತಕ್ಷಣ ಬೆಂಕಿ ಹೊತ್ತಿಕೊಂಡಿದೆ. ವಾಹನವನ್ನು ಕಿಕ್ ಮಾಡಿದ ಕೂಡಲೇ ಬೆಂಕಿಯ ಕಿಡಿ ಕಾಣಿಸಿಕೊಂಡು, ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದೆ. ಕಿಡಿ ಕಾಣಿಸಿಕೊಂಡು ಬೆಂಕಿ ವ್ಯಾಪಿಸುತ್ತಿದ್ದಂತೆ ಸವಾರ ಬೈಕ್ ಬಿಟ್ಟು ಓಡಿದ್ದಾರೆ. ಬಂಕ್ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬೈಕ್ ಸುಟ್ಟು ಭಸ್ಮವಾದರೂ ದೊಡ್ಡ ಅನಾಹುತ ತಪ್ಪಿದೆ.

ರಾಯಚೂರು, ಅಕ್ಟೋಬರ್ 28: ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಪೆಟ್ರೋಲ್ ಬಂಕ್‌ನಲ್ಲಿ ನಡೆದ ಆತಂಕಕಾರಿ ಘಟನೆಯಲ್ಲಿ, ಪಲ್ಸರ್ ಬೈಕ್‌ಗೆ ಇಂಧನ ತುಂಬಿಸುತ್ತಿದ್ದಾಗಲೇ ಅದು ಬೆಂಕಿಗೆ ಆಹುತಿಯಾಗಿದೆ. ಪೆಟ್ರೋಲ್ ಟ್ಯಾಂಕ್ ಭರ್ತಿ ಮಾಡಿಸಿದ ಬಳಿಕ ಬೈಕ್ ಸವಾರ ವಾಹನವನ್ನು ಕಿಕ್ ಮಾಡಿದ ಕೂಡಲೇ ಬೆಂಕಿಯ ಕಿಡಿ ಕಾಣಿಸಿಕೊಂಡು, ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದೆ.

ಬೈಕ್ ಹೊತ್ತಿ ಉರಿಯುತ್ತಿದ್ದನ್ನು ಕಂಡು ಗಾಬರಿಗೊಂಡ ಸವಾರ ತಕ್ಷಣವೇ ಬೈಕ್ ಬಿಟ್ಟು ದೂರ ಓಡಿದ್ದಾರೆ. ಇದರ ಪರಿಣಾಮವಾಗಿ, ಪೆಟ್ರೋಲ್ ಬಂಕ್‌ನಲ್ಲೇ ಬೈಕ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಆದರೆ, ಬಂಕ್‌ನ ಸಿಬ್ಬಂದಿ ತಕ್ಷಣವೇ ಎಚ್ಚೆತ್ತುಕೊಂಡು ಸಮಯಪ್ರಜ್ಞೆ ಮೆರೆದಿದ್ದಾರೆ. ಅವರು ಕಬ್ಬಿಣದ ಸರಪಳಿಯ ಸಹಾಯದಿಂದ ಬೆಂಕಿ ಹೊತ್ತಿಕೊಂಡಿದ್ದ ಬೈಕನ್ನು ಬಂಕ್‌ನಿಂದ ಸುರಕ್ಷಿತವಾಗಿ ಹೊರಗೆ ಎಳೆದಿದ್ದಾರೆ. ಸಿಬ್ಬಂದಿಯ ಈ ಸಾಹಸಮಯ ಕಾರ್ಯದಿಂದಾಗಿ ಪೆಟ್ರೋಲ್ ಬಂಕ್‌ಗೆ ಯಾವುದೇ ಹಾನಿಯಾಗದೆ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 28, 2026 11:57 AM

Follow Us
ಭೀಮೇಶ್​​ ಪೂಜಾರ್
ಭೀಮೇಶ್​​ ಪೂಜಾರ್

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More