ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ಗಂಟೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ. ಅದರಲ್ಲೂ ಮಂಗಳೂರು ನಗರದ ಪಂಪ್‌ವೆಲ್ ವೃತ್ತ ಮತ್ತೆ ಸಂಪೂರ್ಣ ಮುಳುಗಡೆಯಾಗಿದೆ. ರಸ್ತೆ ಮೇಲೆ ಭಾರೀ ಮಳೆ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ರಸ್ತೆಗಳು ನದಿಯಂತಾಗಿದ್ದು, ಟ್ರಾಫಿಕ್ ಜಾಮ್ ಆಗಿದೆ.
ಮಂಗಳೂರು, (ಜೂನ್ 14): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ಗಂಟೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ. ಅದರಲ್ಲೂ ಮಂಗಳೂರು ನಗರದ ಪಂಪ್‌ವೆಲ್ ವೃತ್ತ ಮತ್ತೆ ಸಂಪೂರ್ಣ ಮುಳುಗಡೆಯಾಗಿದೆ. ರಸ್ತೆ ಮೇಲೆ ಭಾರೀ ಮಳೆ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ರಸ್ತೆಗಳು ನದಿಯಂತಾಗಿದ್ದು, ಟ್ರಾಫಿಕ್ ಜಾಮ್ ಆಗಿದೆ.
ರಸ್ತೆಯಲ್ಲೇ ಭಾರೀ ಪ್ರಮಾಣದ ಮಳೆ ನೀರು ಹರಿಯುತ್ತಿರುವ ಹಿನ್ನೆಲೆ ಸಂಪೂರ್ಣ ರಸ್ತೆ ಸಂಚಾರ ಬಂದ್ ಆಗಿದೆ. ಇದೀಗ ರಸ್ತೆಯುದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಂತಿವೆ. ಮಳೆ ನೀರಿನಲ್ಲೇ ಸಂಚರಿಸಲು ಯತ್ನಿಸಿದ ಖಾಸಗಿ ಬಸ್ಸೊಂದು ನಡುರಸ್ತೆಯಲ್ಲೇ ಕೆಟ್ಟು ನಿಂತಿದ್ದು, ನಂತರ ಸ್ಥಳೀಯರು ಬಸ್‌ನ್ನು ತಳ್ಳಿ ರಸ್ತೆ ಪಕ್ಕಕ್ಕೆ ನಿಲ್ಲಿಸಿದ್ದಾರೆ. ಇನ್ನು ಪಂಪ್‌ವೆಲ್ ವೃತ್ತದಲ್ಲಿ ಯಾವ ರೀತಿ ನೀರು ತುಂಬಿದೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.