ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ

Edited By:

Updated on: Jun 14, 2025 | 8:20 PM

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ಗಂಟೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ. ಅದರಲ್ಲೂ ಮಂಗಳೂರು ನಗರದ ಪಂಪ್‌ವೆಲ್ ವೃತ್ತ ಮತ್ತೆ ಸಂಪೂರ್ಣ ಮುಳುಗಡೆಯಾಗಿದೆ. ರಸ್ತೆ ಮೇಲೆ ಭಾರೀ ಮಳೆ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ರಸ್ತೆಗಳು ನದಿಯಂತಾಗಿದ್ದು, ಟ್ರಾಫಿಕ್ ಜಾಮ್ ಆಗಿದೆ.

ಮಂಗಳೂರು, (ಜೂನ್ 14): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ಗಂಟೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ. ಅದರಲ್ಲೂ ಮಂಗಳೂರು ನಗರದ ಪಂಪ್‌ವೆಲ್ ವೃತ್ತ ಮತ್ತೆ ಸಂಪೂರ್ಣ ಮುಳುಗಡೆಯಾಗಿದೆ. ರಸ್ತೆ ಮೇಲೆ ಭಾರೀ ಮಳೆ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ರಸ್ತೆಗಳು ನದಿಯಂತಾಗಿದ್ದು, ಟ್ರಾಫಿಕ್ ಜಾಮ್ ಆಗಿದೆ.

ರಸ್ತೆಯಲ್ಲೇ ಭಾರೀ ಪ್ರಮಾಣದ ಮಳೆ ನೀರು ಹರಿಯುತ್ತಿರುವ ಹಿನ್ನೆಲೆ ಸಂಪೂರ್ಣ ರಸ್ತೆ ಸಂಚಾರ ಬಂದ್ ಆಗಿದೆ. ಇದೀಗ ರಸ್ತೆಯುದ್ದಕ್ಕೂ ವಾಹನಗಳು ಸಾಲುಗಟ್ಟಿ ನಿಂತಿವೆ. ಮಳೆ ನೀರಿನಲ್ಲೇ ಸಂಚರಿಸಲು ಯತ್ನಿಸಿದ ಖಾಸಗಿ ಬಸ್ಸೊಂದು ನಡುರಸ್ತೆಯಲ್ಲೇ ಕೆಟ್ಟು ನಿಂತಿದ್ದು, ನಂತರ ಸ್ಥಳೀಯರು ಬಸ್‌ನ್ನು ತಳ್ಳಿ ರಸ್ತೆ ಪಕ್ಕಕ್ಕೆ ನಿಲ್ಲಿಸಿದ್ದಾರೆ. ಇನ್ನು ಪಂಪ್‌ವೆಲ್ ವೃತ್ತದಲ್ಲಿ ಯಾವ ರೀತಿ ನೀರು ತುಂಬಿದೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.

Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More