ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊನೆಗೂ ಸೆರೆ ಸಿಕ್ಕ ಪುಂಡಾನೆ ಭೈರ; ನಿಟ್ಟುಸಿರು ಬಿಟ್ಟ ಜನರು
ಜಿಲ್ಲೆಯಲ್ಲಿ ಈಗಾಗಲೇ ಇಬ್ಬರನ್ನು ಬಲಿ ಪಡೆದಿದ್ದ ಪುಂಡಾನೆಯನ್ನ ಅರಣ್ಯ ಇಲಾಖೆ ಸಿಬ್ಬಂದಿಗಳು ಇದೀಗ ಹಿಡಿದಿದ್ದಾರೆ.
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಊರುಬಗೆ ಹೊಸಳ್ಳಿಯಲ್ಲಿ ಕಾಡಾನೆಯನ್ನ ಸೆರೆಹಿಡಿಯಲಾಗಿದೆ. ಈಗಾಗಲೇ ಇಬ್ಬರನ್ನು ಬಲಿ ಪಡೆದಿದ್ದ ಮೂಡಿಗೆರೆ ಪುಂಡಾನೆ ಭೈರನನ್ನ ಐದು ಸಾಕಾನೆಗಳ ಮೂಲಕ ಅರಣ್ಯ ಸಿಬ್ಬಂದಿ ಸೆರೆಹಿಡಿದ್ದಾರೆ. ಇನ್ನು ಈ ಪುಂಡಾನೆ ಹಿಡಿಯಲು ಅರಣ್ಯ ಇಲಾಖೆ ಕಳೆದ ಒಂದು ವಾರದಿಂದ ಕಾರ್ಯಾಚರಣೆಗಿಳಿದಿತ್ತು. ಮೂರು ಕಾಡಾನೆಗಳನ್ನು ಸೆರೆಹಿಡಿಯಲು ಸರ್ಕಾರ ಅನುಮತಿ ನೀಡಿದ್ದು ಅರಣ್ಯ ಇಲಾಖೆ ಇದೀಗ ಹಿಡಿದಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Dec 12, 2022 07:39 AM