ಪೋರ್ಷೆ ಕಾರು ಅಪಘಾತದ ಆರೋಪಿ ಅಗರ್ವಾಲ್ ಜೈಲಿನಿಂದ ಹೊರಬರುತ್ತಿದ್ದಂತೆ ಭರ್ಜರಿ ಪಾರ್ಟಿ! ನೋಟಿನ ಹಾರ ಹಾಕಿಕೊಂಡು ಪತ್ನಿಯೊಂದಿಗೆ ಡಾನ್ಸ್

Updated on: May 27, 2026 | 3:04 PM

ಪುಣೆ ಪೋರ್ಷೆ ಅಪಘಾತ ಪ್ರಕರಣದ ಆರೋಪಿ ವಿಶಾಲ್ ಅಗರ್ವಾಲ್ ಜಾಮೀನಿನ ಮೇಲೆ ಹೊರಬಂದ ನಂತರ ನೋಟಿನ ಹಾರ ಧರಿಸಿ ಪತ್ನಿಯೊಂದಿಗೆ ಪಾರ್ಟಿ ಮಾಡಿರುವ ವಿಡಿಯೋ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಮೇ 2024ರಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಇಂಜಿನಿಯರ್‌ಗಳು ಮೃತಪಟ್ಟಿದ್ದರು. ರಕ್ತದ ಮಾದರಿ ಅದಲುಬದಲು ಆರೋಪ ಎದುರಿಸಿದ್ದ ವಿಶಾಲ್, ಈಗ ಪಾಪಪ್ರಜ್ಞೆ ಇಲ್ಲದೆ ಕುಣಿದು ಕುಪ್ಪಳಿಸಿರುವುದು ಜನಸಾಮಾನ್ಯರ ಕೆಂಗಣ್ಣಿಗೆ ಗುರಿಯಾಗಿದೆ.

ಪುಣೆ, ಮೇ.27 : ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಮಹಾರಾಷ್ಟ್ರದ ಪುಣೆಯ ಕಲ್ಯಾಣಿನಗರದ ಪೋರ್ಷೆ (Porsche) ಕಾರು ಭೀಕರ ಅಪಘಾತ ಪ್ರಕರಣದ ಪ್ರಮುಖ ಆರೋಪಿ, ಬಿಲ್ಡರ್ ವಿಶಾಲ್ ಅಗರ್ವಾಲ್ (Vishal Agarwal) ಜೈಲಿನಿಂದ ಹೊರಬಂದ ಬೆನ್ನಲ್ಲೇ ಮತ್ತೊಂದು ದೊಡ್ಡ ವಿವಾದ ಸೃಷ್ಟಿಸಿದ್ದಾರೆ. ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದು ಬಿಡುಗಡೆಯಾಗಿರುವ ವಿಶಾಲ್ ಅಗರ್ವಾಲ್, ತಮ್ಮ ಕುಟುಂಬದೊಂದಿಗೆ ಪಾರ್ಟಿ ಮಾಡಿದ್ದಾರೆ. ನೋಟುಗಳ ಹಾರ ಧರಿಸಿ ಅಸಭ್ಯವಾಗಿ ಡಾನ್ಸ್ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. 2024ರ ಮೇ ತಿಂಗಳಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಯುವ ಐಟಿ ಇಂಜಿನಿಯರ್‌ಗಳ ಪ್ರಾಣ ಪಕ್ಷಿ ಹಾರಿಹೋಗಿತ್ತು. ಈ ಪ್ರಕರಣದಲ್ಲಿ ತನ್ನ ಅಪ್ರಾಪ್ತ ಮಗನನ್ನು ಬಚಾವ್ ಮಾಡಲು ರಕ್ತದ ಮಾದರಿಯನ್ನು ಅದಲುಬದಲು (Blood Sample Swapping) ಮಾಡಿದ ಆರೋಪದ ಮೇಲೆ ವಿಶಾಲ್ ಅಗರ್ವಾಲ್ ಸುದೀರ್ಘ 22 ತಿಂಗಳುಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದರು. ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್ ಇವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆದರೆ, ಜೈಲಿನಿಂದ ಹೊರಬರುತ್ತಿದ್ದಂತೆ ಇಬ್ಬರು ಅಮಾಯಕರ ಜೀವ ಬಲಿಪಡೆದ ಎಂಬ ಪಾಪಪ್ರಜ್ಞೆ ಇಲ್ಲದೆ ನೋಟಿನ ಹಾರಗಳನ್ನು ಹಾಕಿಕೊಂಡು ಪತ್ನಿಯೊಂದಿಗೆ ಕುಣಿದು ಕುಪ್ಪಳಿಸಿರುವುದು ಇದೀಗ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ವಿಡಿಯೋ ಭಾರೀ ವೈರಲ್​ ಆಗುತ್ತಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More