ಪ್ರಿಯಾಂಕ ಖರ್ಗೆ ಅವರೇ ಇದು ಸರಿಯಲ್ಲ: ‘ನಾನು ಬಂದಿರೋದು ಮಂತ್ರಾಲಯಕ್ಕೆ, ನೀವ್ಯಾಕೆ ತಡೀತಿದ್ದೀರಿ?’: ಪುನೀತ್ ಕೆರೆಹಳ್ಳಿ ಗರಂ

Edited By:

Updated on: Jun 09, 2026 | 9:11 PM

ರಾಯಚೂರಿನ ಹಟ್ಟಿ ಪಟ್ಟಣದಲ್ಲಿ ನಡೆಯಲಿರುವ ಹಿಂದೂ ಮಹೋತ್ಸವ ಸಮಾರಂಭಕ್ಕೆ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಪ್ರವೇಶಿಸದಂತೆ ರಾಯಚೂರು ಜಿಲ್ಲಾ ಪೊಲೀಸರು ನಿರ್ಬಂಧ ಹೇರಿದ್ದಾರೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಮಂತ್ರಾಲಯದಲ್ಲಿ ಅವರನ್ನು ತಡೆದು ನೋಟಿಸ್ ನೀಡಲಾಗಿದೆ. ರಾಯಚೂರು ಪೊಲೀಸರ ನಡೆಗೆ ಪುನೀತ್ ಕೆರೆಹಳ್ಳಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ, ಇದು ಹೈಡ್ರಾಮಾಗೆ ಕಾರಣವಾಗಿದೆ.

ರಾಯಚೂರು, ಜೂ.9: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ಇಂದು ಆಯೋಜಿಸಲಾಗಿರುವ ‘ಹಿಂದೂ ಮಹೋತ್ಸವ’ ಸಮಾರಂಭಕ್ಕೆ ಭಾರಿ ಹೈಡ್ರಾಮಾ ಸೃಷ್ಟಿಯಾಗಿದೆ. ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಆಗಮಿಸಬೇಕಿದ್ದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರಿಗೆ ರಾಯಚೂರು ಜಿಲ್ಲಾ ಪೊಲೀಸರು ಜಿಲ್ಲೆಗೆ ಪ್ರವೇಶಿಸದಂತೆ ನಿಷೇಧ ಹೇರಿದ್ದಾರೆ. ಅಷ್ಟೇ ಅಲ್ಲದೆ, ಮಂತ್ರಾಲಯಕ್ಕೂ ಬಂದಿದ್ದ ಪುನೀತ್ ಕೆರೆಹಳ್ಳಿ ಅವರನ್ನು ಅಲ್ಲೇ ತಡೆದು ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಹಟ್ಟಿ ಪಟ್ಟಣದಲ್ಲಿ ಶ್ರೀರಾಮ ಸೇನೆ ಸಂಘಟನೆಯ ನೇತೃತ್ವದಲ್ಲಿ ಇಂದು ಬೃಹತ್ ಹಿಂದೂ ಮಹೋತ್ಸವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಪುನೀತ್ ಕೆರೆಹಳ್ಳಿ ಅವರು ಆಗಮಿಸುತ್ತಿದ್ದರು. ಆದರೆ, ಜಿಲ್ಲೆಯಲ್ಲಿ ಕೋಮು ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಮುನ್ನೆಚ್ಚರಿಕೆ ಕ್ರಮವಾಗಿ ರಾಯಚೂರು ಜಿಲ್ಲಾ ಪೊಲೀಸ್ ಇಲಾಖೆಯು ಅವರಿಗೆ ರಾಯಚೂರು ಜಿಲ್ಲೆಗೆ ಆಗಮಿಸದಂತೆ ಖಡಕ್ ನಿರ್ಬಂಧ ವಿಧಿಸಿದೆ. ಮಂತ್ರಾಲಯದಲ್ಲಿ ತಮಗೆ ಪೊಲೀಸರು ತಡೆ ಒಡ್ಡಿ ನೋಟಿಸ್ ನೀಡಿದ ತಕ್ಷಣ ರಾಯಚೂರು ಪೊಲೀಸರ ನಡೆಗೆ ಪುನೀತ್ ಕೆರೆಹಳ್ಳಿ ತೀವ್ರವಾಗಿ ಗರಂ ಆಗಿದ್ದಾರೆ. “ನಾನು ಮಂತ್ರಾಲಯಕ್ಕೆ ದರ್ಶನಕ್ಕಾಗಿ ಬಂದಿದ್ದೇನೆ. ಇಲ್ಲಿಗೆ ಬಂದು ನನ್ನನ್ನು ತಡೆದು, ಕಾರ್ಯಕ್ರಮಕ್ಕೆ ಬರದಂತೆ ಕಾನೂನುಬಾಹಿರವಾಗಿ ನಿರ್ಬಂಧ ವಿಧಿಸುತ್ತಿದ್ದೀರಿ” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ಜತೆಗೆ ಗೃಹ ಸಚಿವ ಪ್ರಿಯಾಂಕ ಖರ್ಗೆಗೂ ಎಚ್ಚರಿಕೆಯನ್ನು ನೀಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jun 09, 2026 09:11 PM
Follow Us
ಭೀಮೇಶ್​​ ಪೂಜಾರ್

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More