‘ಪುನೀತ್ ಹೆಸರಲ್ಲಿ ಹೊಸ ಸಂಸ್ಥೆ ಅಥವಾ ಸ್ಟುಡಿಯೋ ಆರಂಭಿಸಿ’; ಡಿ.ಕೆ. ಶಿವ​ಕುಮಾರ್​ ಮನವಿ

ಪುನೀತ್ ರಾಜ್​ಕುಮಾರ್​ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದರು. ಇದಕ್ಕೆ ಡಿ.ಕೆ. ಶಿವಕುಮಾರ್​ ಅವರು ಮೆಚ್ಚುಗೆ ಸೂಚಿಸಿದರು.

ಪುನೀತ್​ ರಾಜ್​ಕುಮಾರ್​ ಅವರನ್ನು ಕಳೆದುಕೊಂಡು ಚಿತ್ರರಂಗ ಸಾಕಷ್ಟು ನೋವನ್ನು ಅನುಭವಿಸುತ್ತಿದೆ. ಇಂದು (ನವೆಂಬರ್ 16) ಅವರನ್ನು ನೆನಪಿಸಿಕೊಳ್ಳೋಕೆ ‘ಪುನೀತ ನಮನ ಕಾರ್ಯಕ್ರಮ’ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್​ ಅವರನ್ನು ನೆನಪಿಸಿಕೊಳ್ಳುವ ಕಾರ್ಯ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್​ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್​ ಅವರು ವಿಶೇಷ ಮನವಿ ಒಂದನ್ನು ಮಾಡಿಕೊಂಡಿದ್ದಾರೆ. ಪುನೀತ್ ರಾಜ್​ಕುಮಾರ್​ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದರು. ಇದಕ್ಕೆ ಡಿ.ಕೆ. ಶಿವಕುಮಾರ್​ ಅವರು ಮೆಚ್ಚುಗೆ ಸೂಚಿಸಿದರು. ಇದರ ಜತೆಗೆ ಅವರು ಮುಖ್ಯಮಂತ್ರಿ ಬಳಿ ಮನವಿ ಒಂದನ್ನು ಮಾಡಿಕೊಂಡಿದ್ದಾರೆ. ‘ಪುನೀತ್ ಹೆಸರಲ್ಲಿ ಹೊಸ ಕಲಾವಿದರನ್ನು ಹುಟ್ಟು ಹಾಕುವ ಸಂಸ್ಥೆ ಆರಂಭಿಸಿ. ಇಲ್ಲವೇ ಸ್ಟುಡಿಯೋ ಪ್ರಾರಂಭಿಸಿ’ ಎಂದು ಅವರು ಕೋರಿದ್ದಾರೆ.

ಇದನ್ನೂ ಓದಿ: ಪುನೀತ್​ ರಾಜ್​ಕುಮಾರ್​ಗೆ ಕರ್ನಾಟಕ ರತ್ನ ಘೋಷಣೆ: ಈ ಮೊದಲು ಕರ್ನಾಟಕ ರತ್ನ ಪ್ರಶಸ್ತಿ ಪಡೆದವರು ಇವರು

Click on your DTH Provider to Add TV9 Kannada