‘ಪುನೀತ್ ಹೆಸರಲ್ಲಿ ಹೊಸ ಸಂಸ್ಥೆ ಅಥವಾ ಸ್ಟುಡಿಯೋ ಆರಂಭಿಸಿ’; ಡಿ.ಕೆ. ಶಿವಕುಮಾರ್ ಮನವಿ
ಪುನೀತ್ ರಾಜ್ಕುಮಾರ್ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದರು. ಇದಕ್ಕೆ ಡಿ.ಕೆ. ಶಿವಕುಮಾರ್ ಅವರು ಮೆಚ್ಚುಗೆ ಸೂಚಿಸಿದರು.
ಪುನೀತ್ ರಾಜ್ಕುಮಾರ್ ಅವರನ್ನು ಕಳೆದುಕೊಂಡು ಚಿತ್ರರಂಗ ಸಾಕಷ್ಟು ನೋವನ್ನು ಅನುಭವಿಸುತ್ತಿದೆ. ಇಂದು (ನವೆಂಬರ್ 16) ಅವರನ್ನು ನೆನಪಿಸಿಕೊಳ್ಳೋಕೆ ‘ಪುನೀತ ನಮನ ಕಾರ್ಯಕ್ರಮ’ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ಅವರನ್ನು ನೆನಪಿಸಿಕೊಳ್ಳುವ ಕಾರ್ಯ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ವಿಶೇಷ ಮನವಿ ಒಂದನ್ನು ಮಾಡಿಕೊಂಡಿದ್ದಾರೆ. ಪುನೀತ್ ರಾಜ್ಕುಮಾರ್ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದರು. ಇದಕ್ಕೆ ಡಿ.ಕೆ. ಶಿವಕುಮಾರ್ ಅವರು ಮೆಚ್ಚುಗೆ ಸೂಚಿಸಿದರು. ಇದರ ಜತೆಗೆ ಅವರು ಮುಖ್ಯಮಂತ್ರಿ ಬಳಿ ಮನವಿ ಒಂದನ್ನು ಮಾಡಿಕೊಂಡಿದ್ದಾರೆ. ‘ಪುನೀತ್ ಹೆಸರಲ್ಲಿ ಹೊಸ ಕಲಾವಿದರನ್ನು ಹುಟ್ಟು ಹಾಕುವ ಸಂಸ್ಥೆ ಆರಂಭಿಸಿ. ಇಲ್ಲವೇ ಸ್ಟುಡಿಯೋ ಪ್ರಾರಂಭಿಸಿ’ ಎಂದು ಅವರು ಕೋರಿದ್ದಾರೆ.
ಇದನ್ನೂ ಓದಿ: ಪುನೀತ್ ರಾಜ್ಕುಮಾರ್ಗೆ ಕರ್ನಾಟಕ ರತ್ನ ಘೋಷಣೆ: ಈ ಮೊದಲು ಕರ್ನಾಟಕ ರತ್ನ ಪ್ರಶಸ್ತಿ ಪಡೆದವರು ಇವರು