‘ಅಪ್ಪು ನಮನ’ ಕಾರ್ಯಕ್ರಮಕ್ಕೆ ಬರುವ ಸ್ಟಾರ್ಸ್ಗಳು ಯಾರು? ಇಲ್ಲಿದೆ ಮಾಹಿತಿ
ಸ್ಯಾಂಡಲ್ವುಡ್ನ 142 ಕಲಾವಿದರಿಗೆ ಆಹ್ವಾನ ನೀಡಲಾಗಿದೆ. ಪರಭಾಷೆಯ 40 ಕ್ಕೂ ಹೆಚ್ಚು ಕಲಾವಿದರಿಗೆ ಆಮಂತ್ರಣ ಕೊಡಲಾಗಿದೆ. ದೊಡ್ಮನೆ ಕುಟುಂಬ ಕಾರ್ಯಕ್ರಮದಲ್ಲಿ ಭಾಗಿಯಾಗಲಿದೆ.
ಪುನೀತ್ ರಾಜ್ಕುಮಾರ್ (Puneeth Rajkumar) ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಅವರನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಬಡವಾಗಿದೆ. ಎಲ್ಲ ಕಡೆಗಳಲ್ಲಿ ಪುನೀತ್ ಅವರನ್ನು ನೆನಪಿಸಿಕೊಳ್ಳುವ ಕಾರ್ಯ ನಡೆಯುತ್ತಿದೆ. ನವೆಂಬರ್ 16ರಂದು ಕನ್ನಡ ಚಿತ್ರೋದ್ಯಮದ ಪರವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ‘ಪುನೀತ್ ನಮನ’ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಕಾರ್ಯಕ್ರಮಕ್ಕೆ ಯಾರೆಲ್ಲ ಬರಲಿದ್ದಾರೆ ಎನ್ನುವ ಬಗ್ಗೆ ಗಾಯತ್ರಿ ವಿಹಾರದ ಉಸ್ತುವಾರಿ ವಹಿಸಿಕೊಂಡಿರುವ ಪಂಕಜ್ ಕೊಠಾರಿ ಮಾಹಿತಿ ನೀಡಿದ್ದಾರೆ. ಸ್ಯಾಂಡಲ್ವುಡ್ನ 142 ಕಲಾವಿದರಿಗೆ ಆಹ್ವಾನ ನೀಡಲಾಗಿದೆ. ಪರಭಾಷೆಯ 40 ಕ್ಕೂ ಹೆಚ್ಚು ಕಲಾವಿದರಿಗೆ ಆಮಂತ್ರಣ ಕೊಡಲಾಗಿದೆ. ದೊಡ್ಮನೆ ಕುಟುಂಬ ಕಾರ್ಯಕ್ರಮದಲ್ಲಿ ಭಾಗಿಯಾಗಲಿದೆ. ವಿವಿಐಪಿ, ವಿಐಪಿ ಪಾಸ್ಗಳಿರುತ್ತವೆ. ಪಾಸ್ ಇದ್ದವರಿಗೆ ಮಾತ್ರ ಎಂಟ್ರಿ ಇರಲಿದೆ.
ಇದನ್ನೂ ಓದಿ: ಮಕ್ಕಳ ದಿನಾಚರಣೆಗೆ ಪುನೀತ್ ವಿಶ್; ವೈರಲ್ ಆದ ಹಳೇ ವಿಡಿಯೋ ಕಂಡು ಫ್ಯಾನ್ಸ್ ಭಾವುಕ
‘ಪುನೀತ್ ನಮನ’ ಕಾರ್ಯಕ್ರಮಕ್ಕೆ ಪಾಸ್ ಇಲ್ಲದವರಿಗೆ ನೋ ಎಂಟ್ರಿ; ಪೊಲೀಸರು ಕೊಟ್ಟ ವಾರ್ನಿಂಗ್ ಏನು?