Puneeth Rajkumar: ಪುನೀತ್ ರಾಜ್ಕುಮಾರ್ ಪುಣ್ಯಸ್ಮರಣೆ: ಅಪ್ಪು ಸ್ಮಾರಕಕ್ಕೆ ನಮಿಸಲು ಬಂದ ಅಭಿಮಾನಿಗಳ ದಂಡು
Puneeth Rajkumar Death Anniversary: ಪುನೀತ್ ರಾಜ್ಕುಮಾರ್ ಅವರ 2ನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಡಾ. ರಾಜ್ಕುಮಾರ್ ಕುಟುಂಬದ ಸದಸ್ಯರಿಂದ ಅಪ್ಪು ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಇಷ್ಟದ ತಿನಿಸುಗಳನ್ನು ಮಾಡಿ ಸ್ಮಾರಕದ ಮುಂದೆ ಇರಿಸಲಾಗುತ್ತಿದೆ. ದೂರದ ಊರುಗಳಿಂದ ಬಂದ ಅಭಿಮಾನಿಗಳು ಸರದಿ ಸಾಲಿನಲ್ಲಿ ನಿಂತು ನಮನ ಸಲ್ಲಿಸುತ್ತಿದ್ದಾರೆ.
ನಟ ಪುನೀತ್ ರಾಜ್ಕುಮಾರ್ (Puneeth Rajkumar) ಅವರು ಭೌತಿಕವಾಗಿ ಇಲ್ಲವಾಗಿ ಇಂದಿಗೆ (ಅಕ್ಟೋಬರ್ 29) ಎರಡು ವರ್ಷ ಕಳೆದಿದೆ. ಅಭಿಮಾನಿಗಳ ಹೃದಯದಲ್ಲಿ ಅವರಿಗೆ ಶಾಶ್ವತವಾದ ಸ್ಥಾನ ಸಿಕ್ಕಿದೆ. 2ನೇ ವರ್ಷದ ಪುಣ್ಯಸ್ಮರಣೆ (Puneeth Rajkumar Death Anniversary) ಪ್ರಯುಕ್ತ ಅಪ್ಪು ಸ್ಮಾರಕವನ್ನು ವಿಶೇಷವಾಗಿ ಅಲಂಕರಿಸಲಾಗಿದೆ. ಬೆಳ್ಳಂಬೆಳಗ್ಗೆಯೇ ಅಪಾರ ಸಂಖ್ಯೆಯ ಅಭಿಮಾನಿಗಳು ಸಮಾಧಿ (Puneeth Rajkumar Smaraka) ಬಳಿ ಜಮಾಯಿಸಿದ್ದಾರೆ. ಪುನೀತ್ ರಾಜ್ಕುಮಾರ್ ಭಾವಚಿತ್ರಕ್ಕೆ ನಮಿಸುತ್ತಿದ್ದಾರೆ. ಡಾ. ರಾಜ್ಕುಮಾರ್ ಕುಟುಂಬದ ಸದಸ್ಯರಿಂದ ಅಪ್ಪು ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಇಷ್ಟದ ತಿನಿಸುಗಳನ್ನು ಮಾಡಿ ಸ್ಮಾರಕದ ಮುಂದೆ ಇರಿಸಲಾಗುತ್ತಿದೆ. ದೂರದ ಊರುಗಳಿಂದ ಬಂದ ಅಭಿಮಾನಿಗಳು ಸರದಿ ಸಾಲಿನಲ್ಲಿ ನಿಂತು ನಮನ ಸಲ್ಲಿಸುತ್ತಿದ್ದಾರೆ. ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಲಾಗುತ್ತಿದೆ. ಪುನೀತ್ ರಾಜ್ಕುಮಾರ್ ಅವರ ಸಿನಿಮಾ ಮತ್ತು ಸಾಮಾಜಿಕ ಕೆಲಸಗಳನ್ನು ಅಭಿಮಾನಿಗಳು ಸ್ಮರಿಸಿಕೊಳ್ಳುತ್ತಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.