Puneeth Rajkumar: ಪುನೀತ್ ರಾಜ್​ಕುಮಾರ್​ ಪುಣ್ಯಸ್ಮರಣೆ: ಅಪ್ಪು ಸ್ಮಾರಕಕ್ಕೆ ನಮಿಸಲು ಬಂದ ಅಭಿಮಾನಿಗಳ ದಂಡು

Updated on: Oct 29, 2023 | 11:03 AM

Puneeth Rajkumar Death Anniversary: ಪುನೀತ್​ ರಾಜ್​ಕುಮಾರ್​ ಅವರ 2ನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಡಾ. ರಾಜ್​ಕುಮಾರ್​ ಕುಟುಂಬದ ಸದಸ್ಯರಿಂದ ಅಪ್ಪು ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಇಷ್ಟದ ತಿನಿಸುಗಳನ್ನು ಮಾಡಿ ಸ್ಮಾರಕದ ಮುಂದೆ ಇರಿಸಲಾಗುತ್ತಿದೆ. ದೂರದ ಊರುಗಳಿಂದ ಬಂದ ಅಭಿಮಾನಿಗಳು ಸರದಿ ಸಾಲಿನಲ್ಲಿ ನಿಂತು ನಮನ ಸಲ್ಲಿಸುತ್ತಿದ್ದಾರೆ.

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರು ಭೌತಿಕವಾಗಿ ಇಲ್ಲವಾಗಿ ಇಂದಿಗೆ (ಅಕ್ಟೋಬರ್​ 29) ಎರಡು ವರ್ಷ ಕಳೆದಿದೆ. ಅಭಿಮಾನಿಗಳ ಹೃದಯದಲ್ಲಿ ಅವರಿಗೆ ಶಾಶ್ವತವಾದ ಸ್ಥಾನ ಸಿಕ್ಕಿದೆ. 2ನೇ ವರ್ಷದ ಪುಣ್ಯಸ್ಮರಣೆ (Puneeth Rajkumar Death Anniversary) ಪ್ರಯುಕ್ತ ಅಪ್ಪು ಸ್ಮಾರಕವನ್ನು ವಿಶೇಷವಾಗಿ ಅಲಂಕರಿಸಲಾಗಿದೆ. ಬೆಳ್ಳಂಬೆಳಗ್ಗೆಯೇ ಅಪಾರ ಸಂಖ್ಯೆಯ ಅಭಿಮಾನಿಗಳು ಸಮಾಧಿ (Puneeth Rajkumar Smaraka) ಬಳಿ ಜಮಾಯಿಸಿದ್ದಾರೆ. ಪುನೀತ್ ರಾಜ್​ಕುಮಾರ್​ ಭಾವಚಿತ್ರಕ್ಕೆ ನಮಿಸುತ್ತಿದ್ದಾರೆ. ಡಾ. ರಾಜ್​ಕುಮಾರ್​ ಕುಟುಂಬದ ಸದಸ್ಯರಿಂದ ಅಪ್ಪು ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಇಷ್ಟದ ತಿನಿಸುಗಳನ್ನು ಮಾಡಿ ಸ್ಮಾರಕದ ಮುಂದೆ ಇರಿಸಲಾಗುತ್ತಿದೆ. ದೂರದ ಊರುಗಳಿಂದ ಬಂದ ಅಭಿಮಾನಿಗಳು ಸರದಿ ಸಾಲಿನಲ್ಲಿ ನಿಂತು ನಮನ ಸಲ್ಲಿಸುತ್ತಿದ್ದಾರೆ. ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಲಾಗುತ್ತಿದೆ. ಪುನೀತ್​ ರಾಜ್​ಕುಮಾರ್​ ಅವರ ಸಿನಿಮಾ ಮತ್ತು ಸಾಮಾಜಿಕ ಕೆಲಸಗಳನ್ನು ಅಭಿಮಾನಿಗಳು ಸ್ಮರಿಸಿಕೊಳ್ಳುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published on: Oct 29, 2023 10:42 AM
Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More