Puneeth Rajkumar Birthday: ಪುನೀತ್ ಜನ್ಮದಿನ; ಅಪ್ಪು ಸಮಾಧಿ ದರ್ಶನಕ್ಕೆ ಕಾದು ಕುಳಿತ ಫ್ಯಾನ್ಸ್

Updated on: Mar 17, 2023 | 9:08 AM

ರಾಜ್ ಕುಟುಂಬ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಲಿದೆ. ಮಧ್ಯರಾತ್ರಿ ಫ್ಯಾನ್ಸ್ ಜೊತೆ ಸೇರಿ ರಾಘವೇಂದ್ರ ರಾಜ್​ಕುಮಾರ್ ಕೇಕ್ ಕತ್ತರಿಸಿದ್ದಾರೆ. 

ಇಂದು (ಮಾರ್ಚ್​ 17) ಪುನೀತ್ ರಾಜ್​ಕುಮಾರ್ (Puneeth Rajkumar) ಅವರ ಜನ್ಮದಿನ. ಈ ವಿಶೇಷ ದಿನವನ್ನು ಫ್ಯಾನ್ಸ್ ಆಚರಿಸುತ್ತಿದ್ದಾರೆ. ಅಪ್ಪು ನಮ್ಮೊಂದಿಗೆ ಇಲ್ಲ ಎಂಬ ನೋವು ಸದಾ ಇರುವಂಥದ್ದು. ಅವರ ಹೆಸರನ್ನು ಉಳಿಸುವಂತಹ ಕಾರ್ಯ ಆಗುತ್ತಿದೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿ ಬಳಿ ಫ್ಯಾನ್ಸ್ ನೆರೆದಿದ್ದಾರೆ. ರಾಜ್ ಕುಟುಂಬ ಪುನೀತ್ ಸಮಾಧಿಗೆ ಪೂಜೆ ಸಲ್ಲಿಸಲಿದೆ. ಮಧ್ಯರಾತ್ರಿ ಫ್ಯಾನ್ಸ್ ಜೊತೆ ಸೇರಿ ರಾಘವೇಂದ್ರ ರಾಜ್​ಕುಮಾರ್ ಕೇಕ್ ಕತ್ತರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More