AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ರಿಯ ಜೊತೆಗೆ ಪುನೀತ್ ಸಮಾಧಿಗೆ ಪೂಜೆ ಮಾಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್

ಪುತ್ರಿಯ ಜೊತೆಗೆ ಪುನೀತ್ ಸಮಾಧಿಗೆ ಪೂಜೆ ಮಾಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್

ಮಂಜುನಾಥ ಸಿ.
|

Updated on: Oct 29, 2024 | 11:28 AM

Share

Puneeth Rajkumar: ಪುನೀತ್ ರಾಜ್​ಕುಮಾರ್ ಅಗಲಿ ಇಂದಿಗೆ ಮೂರು ವರ್ಷ. ಕಂಠೀರವ ಸ್ಟುಡಿಯೋನಲ್ಲಿ ಪುನೀತ್ ಸಮಾಧಿಗೆ ಇಂದು ವಿಶೇಷ ಪೂಜೆ ಮಾಡಲಾಯ್ತು. ರಾಘವೇಂದ್ರ ರಾಜ್​ಕುಮಾರ್ ಕುಟುಂಬ ಹಾಗೂ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರುಗಳು ಆಗಮಿಸಿ ಪೂಜೆ ನೆರವೇರಿಸಿದರು.

ಪುನೀತ್ ರಾಜ್​ಕುಮಾರ್ ನಿಧನ ಹೊಂದಿ ಇಂದಿಗೆ ಮೂರು ವರ್ಷಗಳಾಯ್ತು. ಅಪ್ಪು ಪುಣ್ಯಸ್ಮರಣೆಯನ್ನು ಭಕ್ತಿ-ಭಾವಗಳಿಂದ ಕಂಠೀರವ ಸ್ಟುಡಿಯೋನಲ್ಲಿ ಮಾಡಲಾಗುತ್ತಿದೆ. ಅಪ್ಪು ಸಮಾಧಿಯನ್ನು ಹೂಗಳಿಂದ ಅಲಂಕರಿಸಲಾಗಿದೆ. ಬಂದ ಅಭಿಮಾನಿಗಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ದೊಡ್ಮನೆ ಕುಟುಂಬ ಸದಸ್ಯರು ಆಗಮಿಸಿ ಇಂದು ಅಪ್ಪು ಸಮಾಧಿಗೆ ಪೂಜೆ ನೆರವೇರಿಸಿದ್ದಾರೆ. ರಾಘವೇಂದ್ರ ರಾಜ್​ಕುಮಾರ್ ಕುಟುಂಬ, ಪುನೀತ್​ರ ಪತ್ನಿ ಅಶ್ವಿನಿ ಮತ್ತು ಕಿರಿ ಮಗಳೊಟ್ಟಿಗೆ ಆಗಮಿಸಿ ಪೂಜೆ ನೆರವೇರಿಸಿದ್ದಾರೆ. ಯಾವುದೇ ಆಡಂಭರ ಇಲ್ಲದೆ ಸರಳವಾಗಿ ಪೂಜೆ ಮಾಡಿ ಕೈಮುಗಿದಿದೆ ಕುಟುಂಬ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More