ಪುನೀತ್ 3ನೇ ವರ್ಷದ ಪುಣ್ಯಸ್ಮರಣೆ; ಅಪ್ಪು ದೇವಾಲಯದಲ್ಲಿ ವಿಶೇಷ ಪೂಜೆ
ಹಾವೇರಿ ತಾಲ್ಲೂಕಿನ ಯಲಗಚ್ಚ ಗ್ರಾಮದಲ್ಲಿರುವ ಅಭಿಮಾನಿ ಪ್ರಕಾಶ್ ಅವರು ಅಪ್ಪು ದೇವಾಲಯ ನಿರ್ಮಾಣ ಮಾಡಿದ್ದು, ಇಂದು (ಅಕ್ಟೋಬರ್ 29) ಪುಣ್ಯಸ್ಮರಣೆ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಲಾಗಿದೆ. ಪ್ರಕಾಶ್ ಅವರ ಕುಟುಂಬದವರಿಂದ ಅಪ್ಪು ಪ್ರತಿಮೆಗೆ ಪ್ರತಿದಿನ ಪೂಜೆ ಮಾಡಲಾಗುತ್ತದೆ. ಇಂದು ಪುನೀತ್ ಅವರಿಗೆ ಇಷ್ಟವಾದ ಅಡುಗೆಗಳನ್ನು ಮಾಡಿ ನೈವೇದ್ಯ ಅರ್ಪಿಸಲಾಗಿದೆ.
ನಟ ಪುನೀತ್ ರಾಜ್ಕುಮಾರ್ ಅವರು ನಿಧನರಾಗಿ 3 ವರ್ಷ ಕಳೆದಿದೆ. ಅವರ ಅಭಿಮಾನಿಗಳ ಮನದಲ್ಲಿ ಈ ನೋವು ಇಂದಿಗೂ ಇದೆ. ಪುನೀತ್ ರಾಜ್ಕುಮಾರ್ ಅವರ 3ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಹಾವೇರಿ ತಾಲೂಕಿನ ಯಲಗಚ್ಚ ಗ್ರಾಮದಲ್ಲಿ ಅಪ್ಪು ದೇವಾಲಯದಲ್ಲಿ ವಿಶೇಷ ಪೂಜೆ ಮಾಡಲಾಗಿದೆ. ಸೆಪ್ಟೆಂಬರ್ 26ರಂದು ಈ ದೇವಾಲಯ ಲೋಕಾರ್ಪಣೆ ಆಗಿತ್ತು. ಅಪ್ಪು ಅವರ ಅಪ್ಪಟ ಅಭಿಮಾನಿ ಪ್ರಕಾಶ್ ಎಂಬುವವರ ಮನೆಯ ಮುಂದೆ ಈ ದೇವಾಲಯ ನಿರ್ಮಾಣ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos