Puneeth Rajkumar: ಕರುನಾಡ ಧ್ವಜದಲ್ಲಿ ಪುನೀತ್ ಭಾವಚಿತ್ರ; ಎಲ್ಲೆಲ್ಲೂ ರಾರಾಜಿಸುತ್ತಿದೆ ಅಪ್ಪು ಬಾವುಟ
Puneeth Rajkumar Death Anniversary: ಅನೇಕ ರಸ್ತೆಗಳಲ್ಲಿ ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರ ಇರುವ ಕನ್ನಡದ ಬಾವುಟ ಹಾರಾಡುತ್ತಿದೆ. ಹಲವು ಬಗೆಯಲ್ಲಿ ಅಭಿಮಾನಿಗಳು ಅಪ್ಪುಗೆ ನಮನ ಸಲ್ಲಿಸುತ್ತಿದ್ದಾರೆ.
ನಟ ಪುನೀತ್ ರಾಜ್ಕುಮಾರ್ (Puneeth Rajkumar) ಅವರ ಮೊದಲ ವರ್ಷದ ಪುಣ್ಯ ಸ್ಮರಣೆ, ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಬಿಡುಗಡೆ, ಕನ್ನಡ ರಾಜ್ಯೋತ್ಸವ (Kannada Rajyotsava) ಆಚರಣೆ.. ಹೀಗೆ ಈ ಮೂರು ವಿಶೇಷ ದಿನಗಳು ಒಂದರ ಹಿಂದೊಂದು ಬಂದಿರುವ ಕಾರಣ ಅಭಿಮಾನಿಗಳು ಎಲ್ಲವನ್ನೂ ಒಟ್ಟಾಗಿ ಆಚರಿಸುತ್ತಿದ್ದಾರೆ. ಅನೇಕ ರಸ್ತೆಗಳಲ್ಲಿ ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರ (Puneeth Rajkumar Photo) ಇರುವ ಕನ್ನಡದ ಬಾವುಟ ಹಾರಾಡುತ್ತಿದೆ. ಹಲವು ಬಗೆಯಲ್ಲಿ ಅಭಿಮಾನಿಗಳು ಅಪ್ಪುಗೆ ನಮನ ಸಲ್ಲಿಸುತ್ತಿದ್ದಾರೆ. ಪುನೀತ್ ಅವರನ್ನು ಸ್ಫೂರ್ತಿಯಾಗಿ ಇಟ್ಟುಕೊಂಡು ಹತ್ತಾರು ಬಗೆಯ ಸಮಾಜಮುಖಿ ಕಾರ್ಯಗಳನ್ನು ಮಾಡಲಾಗುತ್ತಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Oct 27, 2022 04:19 PM
Latest Videos