Puneeth Rajkumar: ಕರುನಾಡ ಧ್ವಜದಲ್ಲಿ ಪುನೀತ್​ ಭಾವಚಿತ್ರ; ಎಲ್ಲೆಲ್ಲೂ ರಾರಾಜಿಸುತ್ತಿದೆ ಅಪ್ಪು​ ಬಾವುಟ

| Updated By: ಮದನ್​ ಕುಮಾರ್​

Updated on: Oct 27, 2022 | 4:19 PM

Puneeth Rajkumar Death Anniversary: ಅನೇಕ ರಸ್ತೆಗಳಲ್ಲಿ ಪುನೀತ್​ ರಾಜ್​ಕುಮಾರ್​ ಅವರ ಭಾವಚಿತ್ರ ಇರುವ ಕನ್ನಡದ ಬಾವುಟ ಹಾರಾಡುತ್ತಿದೆ. ಹಲವು ಬಗೆಯಲ್ಲಿ ಅಭಿಮಾನಿಗಳು ಅಪ್ಪುಗೆ ನಮನ ಸಲ್ಲಿಸುತ್ತಿದ್ದಾರೆ.

ನಟ ಪುನೀತ್​ ರಾಜ್​ಕುಮಾರ್ (Puneeth Rajkumar)​ ಅವರ ಮೊದಲ ವರ್ಷದ ಪುಣ್ಯ ಸ್ಮರಣೆ, ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಬಿಡುಗಡೆ, ಕನ್ನಡ ರಾಜ್ಯೋತ್ಸವ (Kannada Rajyotsava) ಆಚರಣೆ.. ಹೀಗೆ ಈ ಮೂರು ವಿಶೇಷ ದಿನಗಳು ಒಂದರ ಹಿಂದೊಂದು ಬಂದಿರುವ ಕಾರಣ ಅಭಿಮಾನಿಗಳು ಎಲ್ಲವನ್ನೂ ಒಟ್ಟಾಗಿ ಆಚರಿಸುತ್ತಿದ್ದಾರೆ. ಅನೇಕ ರಸ್ತೆಗಳಲ್ಲಿ ಪುನೀತ್​ ರಾಜ್​ಕುಮಾರ್​ ಅವರ ಭಾವಚಿತ್ರ (Puneeth Rajkumar Photo) ಇರುವ ಕನ್ನಡದ ಬಾವುಟ ಹಾರಾಡುತ್ತಿದೆ. ಹಲವು ಬಗೆಯಲ್ಲಿ ಅಭಿಮಾನಿಗಳು ಅಪ್ಪುಗೆ ನಮನ ಸಲ್ಲಿಸುತ್ತಿದ್ದಾರೆ. ಪುನೀತ್​ ಅವರನ್ನು ಸ್ಫೂರ್ತಿಯಾಗಿ ಇಟ್ಟುಕೊಂಡು ಹತ್ತಾರು ಬಗೆಯ ಸಮಾಜಮುಖಿ ಕಾರ್ಯಗಳನ್ನು ಮಾಡಲಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published on: Oct 27, 2022 04:19 PM