ಜಿಮ್ನಲ್ಲಿ ಪುನೀತ್ ರಾಜ್ಕುಮಾರ್ ವರ್ಕೌಟ್: ಹೇಗಿರುತ್ತಿತ್ತು ಗೊತ್ತಾ ಅಪ್ಪು ಕಸರತ್ತು? ಇಲ್ಲಿದೆ ವಿಡಿಯೋ
ಜಿಮ್ನಲ್ಲಿ ಕಸರತ್ತು ಮಾಡುವ ವಿಡಿಯೋಗಳನ್ನು ಪುನೀತ್ ರಾಜ್ಕುಮಾರ್ ಆಗಾಗ ಪೋಸ್ಟ್ ಮಾಡುತ್ತಿದ್ದರು. ಅದನ್ನು ಕಂಡರೆ ಎಲ್ಲರಿಗೂ ಸ್ಫೂರ್ತಿ ಬರುವಂತಿತ್ತು.
ಪುನೀತ್ ರಾಜ್ಕುಮಾರ್ ಅವರು ಫಿಟ್ನೆಸ್ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದರು. ಶೂಟಿಂಗ್ ಬ್ಯುಸಿ ನಡುವೆಯೂ ಅವರು ವರ್ಕೌಟ್ ತಪ್ಪಿಸುತ್ತಿರಲಿಲ್ಲ. 46ರ ಪ್ರಾಯದಲ್ಲಿ ಹದಿಹರೆಯದವರೂ ನಾಚುವಂತೆ ಅವರು ದೇಹವನ್ನು ಗಟ್ಟಿಮುಟ್ಟಾಗಿ ಇಟ್ಟುಕೊಂಡಿದ್ದರು. ಜಿಮ್ನಲ್ಲಿ ಕಸರತ್ತು ಮಾಡುವ ವಿಡಿಯೋಗಳನ್ನು ಅಪ್ಪು ಆಗಾಗ ಪೋಸ್ಟ್ ಮಾಡುತ್ತಿದ್ದರು. ಅದನ್ನು ಕಂಡರೆ ಎಲ್ಲರಿಗೂ ಸ್ಫೂರ್ತಿ ಬರುವಂತಿತ್ತು. ಎಲ್ಲ ಯುವಕರಿಗೂ ಪುನೀತ್ ಮಾದರಿ ಆಗಿದ್ದರು. ಅಂಥ ವ್ಯಕ್ತಿ ಹೃದಯಾಘಾತದಿಂದ ನಿಧನರಾದರು ಎಂಬ ಸತ್ಯವನ್ನು ಒಪ್ಪಿಕೊಳ್ಳಲು ಅಭಿಮಾನಿಗಳಿಗೆ ಸಾಧ್ಯವಾಗುತ್ತಿಲ್ಲ.
ಕಂಠೀರವ ಸ್ಟೇಡಿಯಂನಲ್ಲಿ ಅಪ್ಪು ಅಂತಿಮ ದರ್ಶನಕ್ಕೆ ಶನಿವಾರ (ಅ.30) ದಿನವಿಡೀ ಅಭಿಮಾನಿಗಳಿಗೆ ಅವಕಾಶ ಮಾಡಿಕೊಡಲಾಗುತ್ತಿದೆ. ದೂರದೂರದ ಊರುಗಳಿಂದ ಜನರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಬಂದು ಕಣ್ಣೀರು ಸುರಿಸುತ್ತಿದ್ದಾರೆ. ಭಾನುವಾರ ಕಂಠೀರವ ಸ್ಡುಡಿಯೋ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ಇದನ್ನೂ ಓದಿ:
Puneeth Rajkumar: ‘ನನ್ನ ತಮ್ಮ ರಾಯಲ್ ಆಗಿಯೇ ಇರುತ್ತಾನೆ’; ಕ್ರೂರ ವಿಧಿಯಿಂದ ಸುಳ್ಳಾಯ್ತು ಶಿವಣ್ಣನ ಈ ಮಾತು
Puneeth Rajkumar: ಶಿವಣ್ಣನ ಎದುರು ಪುನೀತ್ ಹೇಳಿಕೊಂಡಿದ್ದ ಆಸೆ ಈಡೇರಲೇ ಇಲ್ಲ; ಅಭಿಮಾನಿಗಳ ಹೃದಯ ನುಚ್ಚುನೂರು
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್ ಸರ್ಕ್ಯೂಟ್ಗೆ ಸಿಲಿಂಡರ್ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ

