ಪುನೀತ್ಗೆ ಪಾಕಿಸ್ತಾನದ ಅಭಿಮಾನಿಯ ಗಾನ ನಮನ; ಕನ್ನಡದಲ್ಲಿ ಹಾಡು ಹೇಳುವ ಮೂಲಕ ಶ್ರದ್ಧಾಂಜಲಿ
ಹೃದಯಾಘಾತದಿಂದ ನಿಧನರಾಗಿರುವ ಪುನೀತ್ ರಾಜ್ಕುಮಾರ್ ಅವರಿಗೆ ಪಾಕಿಸ್ತಾನದ ಅಭಿಮಾನಿಯೊಬ್ಬರು ಗಾನ ನಮನ ಸಲ್ಲಿಸಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಕುಟುಂಬ ಸಮೇತ ಕುಳಿತು ನೋಡುವಂತಹ ಸಿನಿಮಾಗಳನ್ನು ಮಾಡುತ್ತಿದ್ದ ಪುನೀತ್ ರಾಜ್ಕುಮಾರ್ ಅವರಿಗೆ ದೇಶ-ವಿದೇಶಗಳಲ್ಲೂ ಅಭಿಮಾನಿಗಳಿದ್ದಾರೆ. ನೆಚ್ಚಿನ ನಟನನ್ನು ಕಳೆದುಕೊಂಡು ಎಲ್ಲರೂ ಕಣ್ಣೀರು ಹಾಕುತ್ತಿದ್ದಾರೆ. ಹೃದಯಾಘಾತದಿಂದ ನಿಧನರಾಗಿರುವ ಪುನೀತ್ಗೆ ಪಾಕಿಸ್ತಾನದ ಅಭಿಮಾನಿಯೊಬ್ಬರು ಗಾನ ನಮನ ಸಲ್ಲಿಸಿದ್ದಾರೆ. ‘ರಾಜಕುಮಾರ’ ಸಿನಿಮಾದ ‘ಗೊಂಬೆ ಹೇಳುತೈತೆ..’ ಹಾಗೂ ‘ಮಿಲನ’ ಸಿನಿಮಾದ ‘ನಿನ್ನಿಂದಲೇ ನಿನ್ನಿಂದಲೇ..’ ಗೀತೆಯನ್ನು ಹೇಳುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಪುನೀತ್ ಅಭಿನಯಕ್ಕೆ ಮರುಳಾಗಿದ್ದರು. ಅವರ ಅನೇಕ ಸಿನಿಮಾಗಳು ಬೇರೆ ಬೇರೆ ಭಾಷೆಗಳಿಗೆ ಡಬ್ ಆಗಿ ಕಿರುತೆರೆಯಲ್ಲಿ ಪ್ರಸಾರವಾಗಿವೆ. ಅವುಗಳನ್ನು ನೋಡಿದ ಬೇರೆ ರಾಜ್ಯ-ದೇಶಗಳ ಜನರು ಪುನೀತ್ಗೆ ಅಭಿಮಾನಿಗಳಾಗಿದ್ದರು. ಇಂದು ಅಪ್ಪು ನಮ್ಮೊಂದಿಗಿಲ್ಲ ಎಂಬ ಸತ್ಯವನ್ನು ಯಾರಿಗೂ ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ.
ಇದನ್ನೂ ಓದಿ:
Puneeth Rajkumar: ಪುನೀತ್ ಹೃದಯಾಘಾತದ ವೈರಲ್ ವಿಡಿಯೋ ಅಸಲಿಯೋ ನಕಲಿಯೋ? ಇಲ್ಲಿದೆ ಫ್ಯಾಕ್ಟ್ ಚೆಕ್
‘ಪುನೀತ್ ಸಾವಿನಿಂದ ಕಟು ಸತ್ಯ ಬಯಲಾಗಿದೆ’: ಆತಂಕದಲ್ಲೇ ಅನಿಸಿಕೆ ಹಂಚಿಕೊಂಡ ರಾಮ್ ಗೋಪಾಲ್ ವರ್ಮಾ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು

