ಪುನೀತ್​ಗೆ ಪಾಕಿಸ್ತಾನದ ಅಭಿಮಾನಿಯ ಗಾನ ನಮನ; ಕನ್ನಡದಲ್ಲಿ ಹಾಡು ಹೇಳುವ ಮೂಲಕ ಶ್ರದ್ಧಾಂಜಲಿ

| Updated By: ಮದನ್​ ಕುಮಾರ್​

Updated on: Oct 30, 2021 | 12:33 PM

ಹೃದಯಾಘಾತದಿಂದ ನಿಧನರಾಗಿರುವ ಪುನೀತ್​ ರಾಜ್​ಕುಮಾರ್​ ಅವರಿಗೆ ಪಾಕಿಸ್ತಾನದ ಅಭಿಮಾನಿಯೊಬ್ಬರು ಗಾನ ನಮನ ಸಲ್ಲಿಸಿದ್ದಾರೆ. ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ಕುಟುಂಬ ಸಮೇತ ಕುಳಿತು ನೋಡುವಂತಹ ಸಿನಿಮಾಗಳನ್ನು ಮಾಡುತ್ತಿದ್ದ ಪುನೀತ್​ ರಾಜ್​ಕುಮಾರ್​ ಅವರಿಗೆ ದೇಶ-ವಿದೇಶಗಳಲ್ಲೂ ಅಭಿಮಾನಿಗಳಿದ್ದಾರೆ. ನೆಚ್ಚಿನ ನಟನನ್ನು ಕಳೆದುಕೊಂಡು ಎಲ್ಲರೂ ಕಣ್ಣೀರು ಹಾಕುತ್ತಿದ್ದಾರೆ. ಹೃದಯಾಘಾತದಿಂದ ನಿಧನರಾಗಿರುವ ಪುನೀತ್​ಗೆ ಪಾಕಿಸ್ತಾನದ ಅಭಿಮಾನಿಯೊಬ್ಬರು ಗಾನ ನಮನ ಸಲ್ಲಿಸಿದ್ದಾರೆ. ‘ರಾಜಕುಮಾರ’ ಸಿನಿಮಾದ ‘ಗೊಂಬೆ ಹೇಳುತೈತೆ..’ ಹಾಗೂ ‘ಮಿಲನ’ ಸಿನಿಮಾದ ‘ನಿನ್ನಿಂದಲೇ ನಿನ್ನಿಂದಲೇ..’ ಗೀತೆಯನ್ನು ಹೇಳುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ.

ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಪುನೀತ್​ ಅಭಿನಯಕ್ಕೆ ಮರುಳಾಗಿದ್ದರು. ಅವರ ಅನೇಕ ಸಿನಿಮಾಗಳು ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿ ಕಿರುತೆರೆಯಲ್ಲಿ ಪ್ರಸಾರವಾಗಿವೆ. ಅವುಗಳನ್ನು ನೋಡಿದ ಬೇರೆ ರಾಜ್ಯ-ದೇಶಗಳ ಜನರು ಪುನೀತ್​ಗೆ ಅಭಿಮಾನಿಗಳಾಗಿದ್ದರು. ಇಂದು ಅಪ್ಪು ನಮ್ಮೊಂದಿಗಿಲ್ಲ ಎಂಬ ಸತ್ಯವನ್ನು ಯಾರಿಗೂ ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಇದನ್ನೂ ಓದಿ:

Puneeth Rajkumar: ಪುನೀತ್​ ಹೃದಯಾಘಾತದ ವೈರಲ್​ ವಿಡಿಯೋ ಅಸಲಿಯೋ ನಕಲಿಯೋ? ಇಲ್ಲಿದೆ ಫ್ಯಾಕ್ಟ್​ ಚೆಕ್​

‘ಪುನೀತ್​ ಸಾವಿನಿಂದ ಕಟು ಸತ್ಯ ಬಯಲಾಗಿದೆ’: ಆತಂಕದಲ್ಲೇ ಅನಿಸಿಕೆ ಹಂಚಿಕೊಂಡ ರಾಮ್​ ಗೋಪಾಲ್​ ವರ್ಮಾ

Published On - 12:28 pm, Sat, 30 October 21

Follow us on