ವೀರೇಶ್ ಚಿತ್ರಮಂದಿರದಲ್ಲಿ ಪುನೀತ್ಗೆ 30 ಕಟೌಟ್; ಏನಿದರ ವಿಶೇಷ? ಫ್ಯಾನ್ಸ್ ಹೇಳ್ತಾರೆ ಕೇಳಿ
James Movie: ಪುನೀತ್ ರಾಜ್ಕುಮಾರ್ ಅವರ ಕಟೌಟ್ಗಳನ್ನು ನಿಲ್ಲಿಸುವ ಕಾರ್ಯ ಭರದಿಂದ ಸಾಗುತ್ತಿದೆ. ಈಗಾಗಲೇ ಬೆಂಗಳೂರಿನ ಹಲವು ಚಿತ್ರಮಂದಿರಗಳಲ್ಲಿ ಕಟೌಟ್ ತಲೆ ಎತ್ತಿದೆ.
ಪುನೀತ್ ರಾಜ್ಕುಮಾರ್ (Puneeth Rajkumar) ಅವರು ಹೀರೋ ಆಗಿ ನಟಿಸಿದ ಕೊನೇ ಸಿನಿಮಾ ‘ಜೇಮ್ಸ್’ (James Movie) ಮಾ.17ರಂದು ಎಲ್ಲೆಡೆ ರಿಲೀಸ್ ಆಗುತ್ತಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಎಲ್ಲಿಲ್ಲದ ಕ್ರೇಜ್ ಇದೆ. ಪ್ರತಿ ಚಿತ್ರಮಂದಿರದಲ್ಲೂ ಈ ಚಿತ್ರವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲು ಸಕಲ ಸಿದ್ಧತೆ ನಡೆಯುತ್ತಿದೆ. ಪುನೀತ್ ರಾಜ್ಕುಮಾರ್ ಅವರ ಕಟೌಟ್ಗಳನ್ನು ನಿಲ್ಲಿಸುವ ಕಾರ್ಯ ಭರದಿಂದ ಸಾಗುತ್ತಿದೆ. ಈಗಾಗಲೇ ಬೆಂಗಳೂರಿನ ಹಲವು ಚಿತ್ರಮಂದಿರಗಳಲ್ಲಿ ಕಟೌಟ್ ತಲೆ ಎತ್ತಿದೆ. ಮಾಗಡಿ ರಸ್ತೆಯಲ್ಲಿ ಇರುವ ವೀರೇಶ್ ಥಿಯೇಟರ್ ಮುಂಭಾಗ ಬರೋಬ್ಬರಿ 30 ಕಟೌಟ್ ನಿಲ್ಲಿಸಲು ಪುನೀತ್ ಅಭಿಮಾನಿಗಳು (Puneeth Rajkumar Fans) ಪ್ಲ್ಯಾನ್ ಮಾಡಿದ್ದಾರೆ. ಅದಕ್ಕೆ ಕಾರಣ ಕೂಡ ಇದೆ. ‘ಜೇಮ್ಸ್ ಎಂಬುದು ನಮಗೆ ಸಿನಿಮಾ ಮಾತ್ರ ಅಲ್ಲ. ಅದು ನಮ್ಮ ಎಮೋಷನ್. ಇದು ಪುನೀತ್ ಅಭಿನಯದ 30ನೇ ಸಿನಿಮಾ. ಹಾಗಾಗಿ ಈ ಬಾರಿ ವೀರೇಶ್ ಚಿತ್ರಮಂದಿರದಲ್ಲಿ 30 ಕಟೌಟ್ಗಳನ್ನು ನಿರ್ಮಿಸುತ್ತಿದ್ದೇವೆ’ ಎಂದು ಅಪ್ಪು ಫ್ಯಾನ್ಸ್ ಹೇಳಿದ್ದಾರೆ. ಈ ಚಿತ್ರಕ್ಕೆ ಚೇತನ್ ಕುಮಾರ್ ನಿರ್ದೇಶನ ಮಾಡಿದ್ದು, ಪುನೀತ್ಗೆ ನಾಯಕಿಯಾಗಿ ಪ್ರಿಯಾ ಆನಂದ್ ಅಭಿನಯಿಸಿದ್ದಾರೆ. ಕಿಶೋರ್ ಪತ್ತಿಕೊಂಡ ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಟೀಸರ್ ಧೂಳೆಬ್ಬಿಸಿದೆ. ಈ ಚಿತ್ರದಲ್ಲಿ ಪುನೀತ್ ಪಾತ್ರಕ್ಕೆ ಶಿವರಾಜ್ಕುಮಾರ್ ಧ್ವನಿ ನೀಡಿದ್ದಾರೆ.
ಇದನ್ನೂ ಓದಿ:
‘ಫ್ಯಾನ್ಸ್ಗೆ ಸೆಲ್ಫಿ ಕೊಡಲು ಕಾರು ತಿರುಗಿಸಿಕೊಂಡು ವಾಪಸ್ ಬಂದಿದ್ದರು ಪುನೀತ್’: ಆ ಘಟನೆ ನೆನೆದ ಹರ್ಷ
ಪುನೀತ್ ಮೇಲಿನ ಅಭಿಮಾನಕ್ಕೆ ಮೂರ್ತಿ ಪ್ರತಿಷ್ಠಾಪಿಸಿ ಸಂಭ್ರಮಿಸಿದ ಫ್ಯಾನ್ಸ್; ಇಲ್ಲಿದೆ ವಿಡಿಯೋ
Published on: Mar 09, 2022 10:14 AM
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ

