‘ಆ ನಟನಿಗೆ ಎಲ್ಲವೂ ಗೊತ್ತು, ಆದ್ರೂ ಮಾತಾಡ್ತಿಲ್ಲ’: ಪುನೀತ್​ ಫ್ಯಾನ್ಸ್​ ಆರೋಪ

Edited By:

Updated on: Apr 05, 2024 | 5:16 PM

ಅಶ್ವಿನಿ ಪುನೀತ್​ ರಾಜ್​ಕುಮಾರ್​ ಬಗ್ಗೆ ಅವಹೇಳನಕಾರಿ ಪೋಸ್ಟ್​ ವೈರಲ್​ ಆಗಿದೆ. ‘ಯಾರೋ ಇದರ ಹಿಂದೆ ಇದ್ದಾರೆ. ಉದ್ದೇಶಪೂರ್ವಕವಾಗಿಯೇ ಇದನ್ನೆಲ್ಲ ಮಾಡಿಸುತ್ತಿದ್ದಾರೆ. ಯಾರೂ ಇದನ್ನೆಲ್ಲ ಸುಮ್ಮನೆ ಮಾಡಲ್ಲ. ತಮ್ಮ ಹಿಂದೆ ಯಾರೋ ಇದ್ದಾರೆ ಎಂಬ ಧೈರ್ಯದಿಂದಲೇ ಇಂಥ ಕೆಲಸ ಮಾಡುತ್ತಿದ್ದಾರೆ’ ಎಂಬುದು ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳ ಆರೋಪ.

ಪುನೀತ್​ ರಾಜ್​ಕುಮಾರ್​ ಅವರ ಅಭಿಮಾನಿಗಳು (Puneeth Rajkumar Fans) ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಶ್ವಿನಿ ಪುನೀತ್​ ರಾಜ್​ಕುಮಾರ್​ (Ashwini Puneeth Rajkumar) ಬಗ್ಗೆ ಕೆಲವು ಕಿಡಿಗೇಡಿಗಳು ಅವಹೇಳನಕಾರಿಯಾಗಿ ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿರುವುದೇ ಇದಕ್ಕೆ ಕಾರಣ ಆಗಿದೆ. ದರ್ಶನ್​ (Darshan) ಅಭಿಮಾನಿ ಎಂದು ಕೇಳಿಕೊಂಡಿರುವ ನೆಟ್ಟಿಗರು ಅಶ್ವಿನಿ ಬಗ್ಗೆ ಕೀಳುಮಟ್ಟದ ಪೋಸ್ಟ್​ಗಳನ್ನು ಹಾಕಿದ್ದಾರೆ. ಆ ಬಗ್ಗೆ ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳು ಪ್ರತಿಕ್ರಿಯೆ ನೀಡಿದ್ದಾರೆ. ‘ಆ ನಟ ಕೂಡ ಇದರ ಬಗ್ಗೆ ಮಾತಾಡುತ್ತಿಲ್ಲ. ಅವನಿಗೆ ಮತ್ತು ಅವನ ಹಿಂಬಾಲಕರಿಗೆ ಇದು ಎಲ್ಲವೂ ಗೊತ್ತು. ಯಾರು ಈ ಕೆಲಸ ಮಾಡಿದ್ದಾರೆ? ಇದರ ಹಿಂದೆ ಇರುವವರು ಯಾರು ಎಂಬುದು ಅವನಿಗೆ ಗೊತ್ತು. ಅವರ ಮನೆಯಲ್ಲಿ ಅಕ್ಕ-ತಂಗಿಯರು ಇಲ್ಲವೇ? ಅವರ ತಾಯಿ ಇಲ್ಲವೇ? ಇದನ್ನೆಲ್ಲ ಅವರು ಯೋಚನೆ ಮಾಡಬೇಕು. ತಾಕತ್ತು ಇದ್ದರೆ ಎದುರು ಬಂದ ಫೇಸ್​ ಮಾಡಲಿ. ನಿಮ್ಮಂಥವರಿಂದಲೇ ನಿಮ್ಮ ಹೀರೋಗೆ ಇವತ್ತು ಕೆಟ್ಟ ಹೆಸರು ಬರುತ್ತಿರುವುದು’ ಎಂದು ಅಪ್ಪು ಅಭಿಮಾನಿಗಳು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More