Gandhada Gudi: ‘ಗಂಧದ ಗುಡಿ’ ನೋಡಿ ಅಜ್ಜಿ ಭಾವುಕ; ಪುನೀತ್ ನೆನೆದು ಕಣ್ಣೀರಿಟ್ಟ ಹಿರಿಯ ಜೀವ
Gandhada Gudi | Puneeth Rajkumar: ಎಲ್ಲೆಡೆ ‘ಗಂಧದ ಗುಡಿ’ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅಪ್ಪು ಕೊನೆಯ ಬಾರಿಗೆ ದೊಡ್ಡ ಪರದೆ ಮೇಲೆ ಕಾಣಿಸಿಕೊಂಡಿರುವುದರಿಂದ ಅಭಿಮಾನಿಗಳು ಭಾವನಾತ್ಮಕವಾಗಿ ಕನೆಕ್ಟ್ ಆಗುತ್ತಿದ್ದಾರೆ.
ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ‘ಗಂಧದ ಗುಡಿ’ (Gandhada Gudi) ಸಾಕ್ಷ್ಯಚಿತ್ರವನ್ನು ನೋಡುತ್ತಿದ್ದಾರೆ. ಎಲ್ಲರಿಗೂ ಇದು ಇಷ್ಟ ಆಗುತ್ತಿದೆ. ಪುನೀತ್ ರಾಜ್ಕುಮಾರ್ ಅವರು ಕೊನೆಯ ಬಾರಿಗೆ ದೊಡ್ಡ ಪರದೆ ಮೇಲೆ ಕಾಣಿಸಿಕೊಂಡಿರುವುದರಿಂದ ಅಭಿಮಾನಿಗಳು (Puneeth Rajkumar Fans) ಭಾವನಾತ್ಮಕವಾಗಿ ಕನೆಕ್ಟ್ ಆಗುತ್ತಿದ್ದಾರೆ. ‘ಗಂಧದ ಗುಡಿ’ ನೋಡಿದ ಬಳಿಕ ಅಜ್ಜಿಯೊಬ್ಬರು ಕಣ್ಣೀರು ಹಾಕಿದ್ದಾರೆ. ಕರುನಾಡಿನ ಮನೆಮಗನಂತೆ ಇದ್ದ ಪುನೀತ್ ರಾಜ್ಕುಮಾರ್ (Puneeth Rajkumar) ಅವರನ್ನು ನೆನೆದು ಈ ಹಿರಿಯ ಜೀವ ಗಳಗಳನೆ ಅತ್ತಿದೆ.
Latest Videos