ಪರಭಾಷೆ ಸಿನಿಮಾಗಳಿಂದ ‘ಜೇಮ್ಸ್​’ ಚಿತ್ರಕ್ಕೆ ತೊಂದರೆ; ಆಕ್ರೋಶ ಹೊರಹಾಕಿದ ಅಪ್ಪು ಅಭಿಮಾನಿಗಳು

| Updated By: ಮದನ್​ ಕುಮಾರ್​

Updated on: Mar 23, 2022 | 2:33 PM

ದಿನದಿಂದ ದಿನಕ್ಕೆ ‘ಜೇಮ್ಸ್​’ ಸಿನಿಮಾಗೆ ಚಿತ್ರಮಂದಿರಗಳ ಸಂಖ್ಯೆ ಕಡಿಮೆ ಮಾಡಲಾಗುತ್ತಿದೆ. ಇದಕ್ಕೆ ಪುನೀತ್​ ರಾಜ್​ಕುಮಾರ್​ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪುನೀತ್​ ರಾಜ್​ಕುಮಾರ್​ (Puneeth Rajkumar) ಅಭಿಮಾನಿಗಳಿಗೆ ‘ಜೇಮ್ಸ್​’ ಸಿನಿಮಾ ಬಗ್ಗೆ ವಿಶೇಷವಾದ ಭಾವನೆ ಇದೆ. ಇದು ಅಪ್ಪು ಹೀರೋ ಆಗಿ ನಟಿಸಿದ ಕೊನೇ ಸಿನಿಮಾ ಎಂಬ ಕಾರಣಕ್ಕೆ ಜನರು ಎಮೋಷನಲ್​ ಆಗಿ ಕನೆಕ್ಟ್​ ಆಗಿದ್ದಾರೆ. ಅನೇಕ ಕಡೆಗಳಲ್ಲಿ ಈ ಸಿನಿಮಾದ ಪ್ರದರ್ಶನ ಆಗುತ್ತಿದೆ. ಆದರೆ ಕೆಲವು ಚಿತ್ರಮಂದಿರಗಳಿಂದ ‘ಜೇಮ್ಸ್​’ (James Movie) ಸಿನಿಮಾವನ್ನು ತೆಗೆಯಲಾಗುತ್ತಿದೆ. ಇದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣ ಆಗಿದೆ. ‘ಜೇಮ್ಸ್​’ಗೆ ಮೀಸಲಾಗಿದ್ದ ಚಿತ್ರಮಂದಿರಗಳನ್ನು ‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ (The Kashmir Files) ಆಕ್ರಮಿಸಿಕೊಳ್ಳುತ್ತಿದೆ. ‘ಈ ರೀತಿ ಆಗುತ್ತಿರುವುದು ಸರಿಯಲ್ಲ. ಇದು ಕನ್ನಡ ಚಿತ್ರಕ್ಕೆ ಮಾಡಿದ ಅವಮಾನ’ ಎಂದು ಅಪ್ಪು ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಅಭಿಮಾನಿಗಳಿಂದ ಪ್ರತಿಭಟನೆ ಮಾಡಲಾಗಿದೆ. ಪುನೀತ್​ ಅವರ ಭಾವಚಿತ್ರವನ್ನು ಹಿಡಿದು ಘೋಷಣೆ ಕೂಗಲಾಗಿದೆ. ಅದೇ ರೀತಿ ಬೆಂಗಳೂರಿನಲ್ಲೂ ಅಪ್ಪು ಅಭಿಮಾನಿಗಳಿಂದ ಅಸಮಾಧಾನ ವ್ಯಕ್ತವಾಗಿದೆ. ತೆಲುಗಿನ ‘ಆರ್​ಆರ್​ಆರ್​’ ಸಿನಿಮಾ ಮಾ.25ರಂದು ತೆರೆಕಾಣಲಿರುವ ಹಿನ್ನೆಲೆಯಲ್ಲಿ ‘ಜೇಮ್ಸ್​’ ಚಿತ್ರಕ್ಕೆ ಚಿತ್ರಮಂದಿರಗಳ ಸಂಖ್ಯೆ ಕಡಿಮೆ ಆಗಲಿದೆ. ಆ ಕುರಿತು ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

‘ಜೇಮ್ಸ್​’ ಸಿನಿಮಾ ನೋಡಲು ಬಂದ ಅಭಿಮಾನಿಗಳಿಗೆ ಭರ್ಜರಿ ಬಾಡೂಟ; ಇಲ್ಲಿದೆ ವಿಡಿಯೋ

‘ದಿ ಕಾಶ್ಮೀರ್​ ಫೈಲ್ಸ್​’ಗಿಂತಲೂ ಹೆಚ್ಚು IMDb ರೇಟಿಂಗ್​ ಪಡೆದ ‘ಜೇಮ್ಸ್​’; 10ಕ್ಕೆ 9.9 ನೀಡಿದ ಪ್ರೇಕ್ಷಕರು