‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಅಭಿಮಾನಿಗಳಿಂದ ಹಾಲಿನ ಅಭಿಷೇಕ

Updated on: Mar 13, 2026 | 4:24 PM

ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ನಟನೆಯ ‘ಆಕಾಶ್’ ಸಿನಿಮಾ ಇಂದು (ಮಾರ್ಚ್ 13) ಮರು ಬಿಡುಗಡೆ ಆಗಿದೆ. ಹಲವು ಚಿತ್ರಮಂದಿರಗಳಲ್ಲಿ ಅಪ್ಪು ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಬೆಂಗಳೂರಿನ ನರ್ತಕಿ ಚಿತ್ರಮಂದಿರದ ಎದುರು ಫ್ಯಾನ್ಸ್ ಸಂಭ್ರಮ ಜೋರಾಗಿತ್ತು. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..

ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ನಟನೆಯ ‘ಆಕಾಶ್’ ಸಿನಿಮಾ (Akash movie) ಇಂದು (ಮಾರ್ಚ್ 13) ಮರು ಬಿಡುಗಡೆ ಆಗಿದೆ. ಹಲವು ಚಿತ್ರಮಂದಿರಗಳಲ್ಲಿ ಅಪ್ಪು ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಬೆಂಗಳೂರಿನ ನರ್ತಕಿ ಚಿತ್ರಮಂದಿರದ ಎದುರು ಫ್ಯಾನ್ಸ್ ಸಂಭ್ರಮ ಜೋರಾಗಿತ್ತು. ಸಿನಿಮಾದ ಪೋಸ್ಟರ್​ಗೆ ಹಾಲಿನ ಅಭಿಷೇಕ ಮಾಡಲಾಯಿತು. ಪುನೀತ್ ರಾಜ್​ಕುಮಾರ್ ಅವರಿಗೆ ಜೈಕಾರ ಕೂಗಲಾಯಿತು. ಮಾರ್ಚ್ 17ರಂದು ಅಪ್ಪು ಜನ್ಮದಿನ. ಆ ಪ್ರಯುಕ್ತ ಅಭಿಮಾನಿಗಳ ಖುಷಿಗಾಗಿ ‘ಆಕಾಶ್’ ಸಿನಿಮಾವನ್ನು ಮರುಬಿಡುಗಡೆ ಮಾಡಲಾಗಿದೆ. ಪುನೀತ್ (Puneeth Rajkumar) ಕುಟುಂಬದ ಸದಸ್ಯರು ಮತ್ತು ನಟಿ ರಮ್ಯಾ ಕೂಡ ಚಿತ್ರಮಂದಿರಕ್ಕೆ ಬಂದು ಅಭಿಮಾನಿಗಳ ಸಂಭ್ರಮದಲ್ಲಿ ಭಾಗಿಯಾದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More