Puneeth Rajkumar Health: ಪುನೀತ್ ದಾಖಲಾದ ವಿಕ್ರಂ ಆಸ್ಪತ್ರೆ ಎದುರು ಸಂಚಾರ ಬಂದ್
‘ಪವರ್ ಸ್ಟಾರ್’ ಪುನೀತ್ ರಾಜ್ಕುಮಾರ್ ಅವರ ಆರೋಗ್ಯದಲ್ಲಿ ಏಕಾಏಕಿ ಏರುಪೇರು ಉಂಟಾಗಿದೆ. ಸದ್ಯ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಟ ಪುನೀತ್ ರಾಜ್ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿರುವ ಸುದ್ದಿ ಕೇಳಿ ಅಭಿಮಾನಿಗಳು ಆತಂಕಗೊಂಡಿದ್ದಾರೆ. ಸದ್ಯ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಪುನೀತ್ಗೆ ಚಿಕಿತ್ಸೆ ನೀಡಲಾಗುತ್ತಿದೆ. ಸೆಲೆಬ್ರಿಟಿಗಳು, ಆಪ್ತರು ಆಸ್ಪತ್ರೆಗೆ ದೌಡಾಯಿಸುತ್ತಿದ್ದಾರೆ. ಹಾಗಾಗಿ ಮಿಲ್ಲರ್ಸ್ ರಸ್ತೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿದೆ. ಆ ರಸ್ತೆಯಲ್ಲಿ ಪೊಲೀಸರು ಸಂಚಾರ ಬಂದ್ ಮಾಡಿಸಿದ್ದಾರೆ. ಬ್ಯಾರಿಕೇಡ್ಗಳನ್ನು ಹಾಕಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಬಿಗಿ ಮಾಡಲಾಗುತ್ತಿದೆ. ಪೊಲೀಸರು ಸ್ಥಳದಲ್ಲಿ ಜಮಾಯಿಸಿದ್ದಾರೆ. ಯಾರನ್ನೂ ಒಳಗಡೆ ಬಿಡುತ್ತಿಲ್ಲ.
ವಿಕ್ರಂ ಆಸ್ಪತ್ರೆಯ ಐಸಿಯುನಲ್ಲಿ ಪುನೀತ್ ರಾಜ್ಕುಮಾರ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ಹೃದಯಸಂಬಂಧಿ ಸಮಸ್ಯೆ ಉಂಟಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದರಿಂದ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ. ಅಪಾರ ಸಂಖ್ಯೆಯ ಅಭಿಮಾನಿಗಳು ಆಸ್ಪತ್ರೆ ಬಳಿ ಬರುತ್ತಿದ್ದಾರೆ. ಪುನೀತ್ ಆರೋಗ್ಯದ ಬಗ್ಗೆ ಕುಟುಂಬದವರಿಂದ ಅಧಿಕೃತ ಹೇಳಿಕೆಯನ್ನು ಫ್ಯಾನ್ಸ್ ನಿರೀಕ್ಷಿಸುತ್ತಿದ್ದಾರೆ.
ಇದನ್ನೂ ಓದಿ:
ಪುನೀತ್ಗೆ ತೀವ್ರ ಹೃದಯಾಘಾತವಾಗಿದೆ, ಆರೋಗ್ಯ ಸ್ಥಿತಿ ಗಂಭೀರವಾಗಿದೆ, ಏನನ್ನೂ ಹೇಳೋಕೆ ಆಗಲ್ಲ; ಆಸ್ಪತ್ರೆ ವೈದ್ಯರು
ಪುನೀತ್ ಆರೋಗ್ಯದ ಸ್ಥಿತಿ ಗಂಭೀರ; ಅಳುತ್ತಲೇ ಆಸ್ಪತ್ರೆಗೆ ಬಂದ ಶಿವರಾಜ್ಕುಮಾರ್