ಪುನೀತ್ಗೆ ಮೈಸೂರು ವಿವಿಯಿಂದ ಡಾಕ್ಟರೇಟ್; ಕಾರ್ಯಕ್ರಮದಲ್ಲಿ ರಾಜ್ ಕುಟುಂಬ ಭಾಗಿ
ಇಂದು (ಮಾರ್ಚ್ 22) ಮೈಸೂರು ವಿವಿಯ 102ನೇ ಘಟಿಕೋತ್ಸವ ನಡೆಯುತ್ತಿದೆ. ಈ ಸಂದರ್ಭದಲ್ಲಿ ಅಶ್ವಿನಿ ಅವರಿಗೆ ಪುನೀತ್ ಪರವಾಗಿ ಗೌರವ ಸಲ್ಲಿಸಲಾಗಿದೆ.
ದೇಶದ ಪ್ರತಿಷ್ಠಿತ ವಿಶ್ವ ವಿದ್ಯಾನಿಲಯಗಳಲ್ಲಿ ಒಂದಾಗಿರುವ ಮೈಸೂರು ವಿಶ್ವವಿದ್ಯಾನಿಲಯವು (Mysuru University) ಪುನೀತ್ ರಾಜ್ಕುಮಾರ್ಗೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ನೀಡಿದೆ. ಪುನೀತ್ (Puneeth Rajkumar) ಪರವಾಗಿ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ (Ashwini Puneeth) ಅವರು ಈ ಗೌರವವನ್ನು ಸ್ವೀಕರಿಸಿದ್ದಾರೆ. ವಿಶೇಷ ಎಂದರೆ 46 ವರ್ಷದ ಹಿಂದೆ ಡಾ.ರಾಜ್ಕುಮಾರ್ ಅವರಿಗೂ ಮೈಸೂರು ವಿವಿ ಗೌರವ ಡಾಕ್ಟರೇಟ್ ನೀಡಿತ್ತು. ಸಿನಿಮಾ ಕ್ಷೇತ್ರ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಪುನೀತ್ ನೀಡಿದ ಕೊಡುಗೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ. ಇಂದು (ಮಾರ್ಚ್ 22) ಮೈಸೂರು ವಿವಿಯ 102ನೇ ಘಟಿಕೋತ್ಸವ ನಡೆಯುತ್ತಿದೆ. ಈ ಸಂದರ್ಭದಲ್ಲಿ ಅಶ್ವಿನಿ ಅವರಿಗೆ ಪುನೀತ್ ಪರವಾಗಿ ಗೌರವ ಸಲ್ಲಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪುನೀತ್ ಕುಟುಂಬ ಭಾಗಿಯಾಗಿದ್ದು ವಿಶೇಷವಾಗಿತ್ತು. ಈ ಮೂಲಕ ಪುನೀತ್ ಇನ್ನುಮುಂದೆ ಡಾ. ಪುನೀತ್ ರಾಜ್ಕುಮಾರ್ ಎಂದು ಕರೆಸಿಕೊಳ್ಳಲಿದ್ದಾರೆ.
ಇದನ್ನೂ ಓದಿ: James Box Office Collection: ಬಾಕ್ಸ್ ಆಫೀಸ್ನಲ್ಲಿ ಹೊಸ ದಾಖಲೆ ಬರೆದ ‘ಜೇಮ್ಸ್’; ಅಪ್ಪು ಶತಕದ ಸರದಾರ