ಜಪಾನ್ನಿಂದ ಬಂದು ರಾಘಣ್ಣನನ್ನು ಭೇಟಿ ಮಾಡಿದ ಪುನೀತ್ ರಾಜ್ಕುಮಾರ್ ಫ್ಯಾನ್ಸ್
ಜಪಾನ್ನ ರಾಜಧಾನಿ ಟೋಕಿಯೋದಿಂದ ಪುನೀತ್ ಅಭಿಮಾನಿಗಳು ಬೆಂಗಳೂರಿಗೆ ಆಗಮಿಸಿದ್ದಾರೆ. ರಾಘವೇಂದ್ರ ರಾಜ್ಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಪುನೀತ್ ರಾಜ್ಕುಮಾರ್ (Puneeth Rajkumar) ಅವರ ಖ್ಯಾತಿ ವಿಶ್ವಾದ್ಯಂತ ಹಬ್ಬಿದೆ. ಅವರು ನಮ್ಮ ಜತೆ ಇಲ್ಲದೆ ಇದ್ದರೂ ಫ್ಯಾನ್ಸ್ ಅವರನ್ನು ನಾನಾ ರೀತಿಯಲ್ಲಿ ನೆನಪಿಸಿಕೊಳ್ಳುತ್ತಿದ್ದಾರೆ. ಕೇವಲ ನಟನೆ ಮಾತ್ರವಲ್ಲದೆ, ಸಾಮಾಜಿಕ ಕೆಲಸಗಳಿಂದಲೂ ಪುನೀತ್ ಹೆಸರು ಮಾಡಿದ್ದರು. ಈಗ ಜಪಾನ್ನ ರಾಜಧಾನಿ ಟೋಕಿಯೋದಿಂದ ಪುನೀತ್ ಅಭಿಮಾನಿಗಳು ಬೆಂಗಳೂರಿಗೆ ಆಗಮಿಸಿದ್ದಾರೆ. ರಾಘವೇಂದ್ರ ರಾಜ್ಕುಮಾರ್ (Raghavendra Rajkumar) ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.