‘ಬರ್ತ್​​​ಡೇ ದಿನ ಮನೆಯಲ್ಲಿ ಇರಲ್ಲ’; ಅಭಿಮಾನಿಗಳನ್ನು ಮತ್ತೆ ಭಾವುಕಗೊಳಿಸಿದ ಹಳೆಯ ವಿಡಿಯೋ

Updated on: Mar 09, 2026 | 12:10 PM

ಪುನೀತ್ ರಾಜ್​​​ಕುಮಾರ್ ಅವರು ಇಂದು ನಮ್ಮೊಂದಿಗೆ ಇಲ್ಲ. ಆದರೆ, ಮಾರ್ಚ್ 17 ಬಂತು ಎಂದರೆ ಅವರ ನೆನಪು ಅತೀವವಾಗಿ ಕಾಡುತ್ತದೆ. ಇದಕ್ಕೆ ಕಾರಣ ಪುನೀತ್ ರಾಜ್​​ಕುಮಾರ್ ಜನ್ಮದಿನ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಭಾವುಕರಾಗಿ ಮಾತನಾಡಿದರು. ಆ ವಿಡಿಯೋ ಅಭಿಮಾನಿಗಳನ್ನು ಕೂಡ ಭಾವುಕರಾಗಿಸಿದೆ.

ಪುನೀತ್ ರಾಜ್​​​ಕುಮಾರ್ ಅವರು ಇಂದು ನಮ್ಮೊಂದಿಗೆ ಇಲ್ಲ. ಮಾರ್ಚ್ 17 ಅವರ ಜನ್ಮದಿನ. ಅಪ್ಪು ಇಲ್ಲದೆ ಹುಟ್ಟುಹಬ್ಬ ಆಚರಿಸೋದು ಅಭಿಮಾನಿಗಳ ಪಾಲಿಗೆ ನಿಜಕ್ಕೂ ಕಷ್ಟ. ಈಗ ಪುನೀತ್ ರಾಜ್​​ಕುಮಾರ್ ಅವರ ಹಳೆಯ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಪುನೀತ್ ಅವರು ‘ಈ ಬಾರಿ ನಾನು ಬರ್ತ್​​ಡೇ ದಿನ ಮನೆಯಲ್ಲಿ ಇರಲ್ಲ. ಮನೆ ಬಳಿ ಬರಬೇಡಿ’ ಎಂದು ಕೋರಿದ್ದರು. ಈ ವಿಡಿಯೋ ಮತ್ತೆ ವೈರಲ್ ಆಗಿದೆ. ‘ಐದು ವರ್ಷಗಳಿಂದ ಪುನೀತ್ ಇದೇ ಮಾತನ್ನು ಹೇಳುತ್ತಿದ್ದಾರೆ’ ಎಂದು ಫ್ಯಾನ್ಸ್ ಹೇಳಿಕೊಂಡು ಭಾವುಕರಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Mar 09, 2026 12:07 PM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More