Puneeth Rajkumar Road: ಪುನೀತ್​ ರಾಜ್​ಕುಮಾರ್​ ರಸ್ತೆ ಉದ್ಘಾಟನೆ: ಅದ್ದೂರಿ ಕಾರ್ಯಕ್ರಮದ ಲೈವ್​ ನೋಡಲು ಇಲ್ಲಿ ಕ್ಲಿಕ್​ ಮಾಡಿ

|

Updated on: Feb 07, 2023 | 7:16 PM

Puneeth Rajkumar Road Inauguration: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ‘ಪುನೀತ್​ ರಾಜ್​ಕುಮಾರ್​ ರಸ್ತೆ’ ಅನಾವರಣ ಮಾಡುತ್ತಿದ್ದಾರೆ. ಆ ಕಾರ್ಯಕ್ರಮದ ಲೈವ್​ ವಿಡಿಯೋ ಇಲ್ಲಿದೆ..

ನಟ ಪುನೀತ್ ರಾಜ್​ಕುಮಾರ್ (Puneeth Rajkumar) ಹೆಸರನ್ನು ಅಮರವಾಗಿಸುವ ಕಾರ್ಯ ಅನೇಕ ಕಡೆಗಳಲ್ಲಿ ಆಗುತ್ತಿದೆ. ಬೆಂಗಳೂರಿನಲ್ಲಿ ಮೈಸೂರು ರಸ್ತೆಯಿಂದ ಬನ್ನೇರುಘಟ್ಟದವರೆಗಿನ 12 ಕಿಲೋಮೀಟರ್​ ರಸ್ತೆಗೆ ಪುನೀತ್ ಹೆಸರನ್ನು ಇಡಲಾಗಿದೆ. ಇಂದು (ಫೆ.7) ಪುನೀತ್​ ರಾಜ್​ಕುಮಾರ್ ರಸ್ತೆ’ (Puneeth Rajkumar Road) ಉದ್ಘಾಟನೆ ಮಾಡಲಾಗುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಲೋಕಾರ್ಪಣೆ ಮಾಡುತ್ತಿದ್ದಾರೆ. ವೇದಿಕೆಯಲ್ಲಿ ಅನೇಕ ಕಾರ್ಯಕ್ರಮಗಳು ನಡೆಯುತ್ತಿವೆ. ಪದ್ಮನಾಭ ನಗರದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಡಾ. ರಾಜ್​ಕುಮಾರ್​ ಕುಟುಂಬದ ಸದಸ್ಯರು, ಅಪಾರ ಸಂಖ್ಯೆಯ ಅಭಿಮಾನಿಗಳು ಭಾಗವಹಿಸಿದ್ದಾರೆ. ಸಮಾರಂಭದ ಲೈವ್​ ವಿಡಿಯೋ ಇಲ್ಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.