ಅಪ್ಪು ಸಿನಿಮಾ ಅದ್ದೂರಿ ಮರು ಬಿಡುಗಡೆ; ಫ್ಯಾನ್ಸ್ ಸಂಭ್ರಮ ಕಣ್ತುಂಬಿಕೊಂಡ ಯುವ
ಹೀರೋ ಆಗಿ ಪುನೀತ್ ರಾಜ್ಕುಮಾರ್ ನಟಿಸಿದ ಮೊದಲ ಸಿನಿಮಾ ‘ಅಪ್ಪು’ ಇಂದು (ಮಾರ್ಚ್ 14) ಪುನಃ ಬಿಡುಗಡೆ ಆಗಿದೆ. ರಾಜ್ಯಾದ್ಯಂತ ಹಲವು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಅಭಿಮಾನಿಗಳು ಎಲ್ಲೆಡೆ ಸಂಭ್ರಮಿಸುತ್ತಿದ್ದಾರೆ. ಸೆಲೆಬ್ರಿಟಿಗಳು ಸಹ ಚಿತ್ರಮಂದಿರಕ್ಕೆ ಆಗಮಿಸುತ್ತಿದ್ದಾರೆ. ಹೊಸ ಸಿನಿಮಾ ಬಿಡುಗಡೆ ಆಗುತ್ತಿದೆ ಎಂಬ ರೀತಿಯೇ ಸೆಲೆಬ್ರೇಟ್ ಮಾಡಲಾಗುತ್ತಿದೆ.
‘ಪವರ್ ಸ್ಟಾರ್’ ಪುನೀತ್ ರಾಜ್ಕುಮಾರ್ (Puneeth Rajkumar) ಹೀರೋ ಆಗಿ ಅಭಿನಯಿಸಿದ ಚೊಚ್ಚಲ ಸಿನಿಮಾ ‘ಅಪ್ಪು’ (Appu) ಇಂದು (ಮಾ.14) ಮರು ಬಿಡುಗಡೆಯಾಗಿದೆ. ರಾಜ್ಯಾದ್ಯಂತ ಅನೇಕ ಚಿತ್ರಮಂದಿರಗಳಲ್ಲಿ ಅದ್ದೂರಿಯಾಗಿ ಪ್ರದರ್ಶನ ಕಾಣುತ್ತಿದೆ. ಪುನೀತ್ ರಾಜ್ಕುಮಾರ್ ಫ್ಯಾನ್ಸ್ ಎಲ್ಲೆಡೆ ಸಂಭ್ರಮಿಸುತ್ತಿದ್ದಾರೆ. ಸ್ಯಾಂಡಲ್ವುಡ್ ಸೆಲೆಬ್ರಿಟಿಗಳು ಕೂಡ ಚಿತ್ರಮಂದಿರಕ್ಕೆ ಆಗಮಿಸುತ್ತಿದ್ದಾರೆ. ಯುವ ರಾಜ್ಕುಮಾರ್ (Yuva Rajkumar), ರಾಘವೇಂದ್ರ ರಾಜ್ಕುಮಾರ್ ಮುಂತಾದವರು ಅಭಿಮಾನಿಗಳ ಜೊತೆ ಸೇರಿ ಸಂಭ್ರಮಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos