ಅಪ್ಪು ಸಿನಿಮಾ ಅದ್ದೂರಿ ಮರು ಬಿಡುಗಡೆ; ಫ್ಯಾನ್ಸ್ ಸಂಭ್ರಮ ಕಣ್ತುಂಬಿಕೊಂಡ ಯುವ

Updated on: Mar 14, 2025 | 11:08 AM

ಹೀರೋ ಆಗಿ ಪುನೀತ್ ರಾಜ್​ಕುಮಾರ್ ನಟಿಸಿದ ಮೊದಲ ಸಿನಿಮಾ ‘ಅಪ್ಪು’ ಇಂದು (ಮಾರ್ಚ್​ 14) ಪುನಃ ಬಿಡುಗಡೆ ಆಗಿದೆ. ರಾಜ್ಯಾದ್ಯಂತ ಹಲವು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಅಭಿಮಾನಿಗಳು ಎಲ್ಲೆಡೆ ಸಂಭ್ರಮಿಸುತ್ತಿದ್ದಾರೆ. ಸೆಲೆಬ್ರಿಟಿಗಳು ಸಹ ಚಿತ್ರಮಂದಿರಕ್ಕೆ ಆಗಮಿಸುತ್ತಿದ್ದಾರೆ. ಹೊಸ ಸಿನಿಮಾ ಬಿಡುಗಡೆ ಆಗುತ್ತಿದೆ ಎಂಬ ರೀತಿಯೇ ಸೆಲೆಬ್ರೇಟ್ ಮಾಡಲಾಗುತ್ತಿದೆ.

‘ಪವರ್​ ಸ್ಟಾರ್’ ಪುನೀತ್ ರಾಜ್​ಕುಮಾರ್ (Puneeth Rajkumar) ಹೀರೋ ಆಗಿ ಅಭಿನಯಿಸಿದ ಚೊಚ್ಚಲ ಸಿನಿಮಾ ‘ಅಪ್ಪು’ (Appu) ಇಂದು (ಮಾ.14) ಮರು ಬಿಡುಗಡೆಯಾಗಿದೆ. ರಾಜ್ಯಾದ್ಯಂತ ಅನೇಕ ಚಿತ್ರಮಂದಿರಗಳಲ್ಲಿ ಅದ್ದೂರಿಯಾಗಿ ಪ್ರದರ್ಶನ ಕಾಣುತ್ತಿದೆ. ಪುನೀತ್​ ರಾಜ್​ಕುಮಾರ್​ ಫ್ಯಾನ್ಸ್ ಎಲ್ಲೆಡೆ ಸಂಭ್ರಮಿಸುತ್ತಿದ್ದಾರೆ. ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳು ಕೂಡ ಚಿತ್ರಮಂದಿರಕ್ಕೆ ಆಗಮಿಸುತ್ತಿದ್ದಾರೆ. ಯುವ ರಾಜ್​ಕುಮಾರ್​ (Yuva Rajkumar), ರಾಘವೇಂದ್ರ ರಾಜ್​ಕುಮಾರ್​ ಮುಂತಾದವರು ಅಭಿಮಾನಿಗಳ ಜೊತೆ ಸೇರಿ ಸಂಭ್ರಮಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More