ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ಮಾಡಬೇಕು ಎನ್ನುವ ಆಸೆ ಇಟ್ಟುಕೊಂಡಿದ್ದರು ಪುನೀತ್​

| Updated By: ರಾಜೇಶ್ ದುಗ್ಗುಮನೆ

Updated on: Nov 08, 2021 | 9:47 PM

20 ಸಾವಿರ ಜನರಿಗೆ ಮಾಂಸಾಹಾರಿ ಊಟದ ವ್ಯವಸ್ಥೆ ಮಾಡಲಾಗಿದೆ. 5 ಸಾವಿರ ಜನರಿಗೆ ಸಸ್ಯಾಹಾರಿ ಊಟಕ್ಕೆ ವ್ಯವಸ್ಥೆ ನಡೆಸಲಾಗುತ್ತಿದೆ. ಒಟ್ಟು 25 ಸಾವಿರ ಜನಕ್ಕೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.

ಪುನೀತ್​ ರಾಜ್​ಕುಮಾರ್ (Puneeth Rajkumar)​ ದೊಡ್ಡ ಅಭಿಮಾನಿ ಬಳಗವನ್ನು ತೊರೆದು ಹೋಗಿದ್ದಾರೆ. ಅವರು ಸಿನಿಮಾ ಹಾಗೂ ಸಾಮಾಜಿಕ ಕೆಲಸದ ಮೂಲಕ ಜನರ ಮನದಲ್ಲಿ ಅಚ್ಚು ಮೂಡಿಸಿ ಹೋಗಿದ್ದಾರೆ. ಅವರು ಅಗಲಿ ಇಂದಿಗೆ (ಅಕ್ಟೋಬರ್ 9) 12 ದಿನಗಳಾಗಿವೆ. ಈ ಕಾರಣಕ್ಕೆ ದೊಡ್ಮನೆ ಕುಟುಂಬ ಅಭಿಮಾನಿಗಳಿಗೆ ಅನ್ನಸಂತರ್ಪಣೆ ಮಾಡುತ್ತಿದೆ. ಪುನೀತ್​ ರಾಜ್​ಕುಮಾರ್​ ಹೆಸರಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಅಚ್ಚರಿ ಎಂದರೆ ಅಭಿಮಾನಿಗಳಿಗೆ ಅನ್ನ ಸಂತ್ಪಣೆ ಮಾಡಬೇಕು ಎನ್ನುವ ಕನಸನ್ನು ಅವರು ಹೊಂದಿದ್ದರು. ಈ ಬಗ್ಗೆ ರಾಜು ಗೌಡ ಮಾಹಿತಿ ನೀಡಿದ್ದಾರೆ.

20 ಸಾವಿರ ಜನರಿಗೆ ಮಾಂಸಾಹಾರಿ ಊಟದ ವ್ಯವಸ್ಥೆ ಮಾಡಲಾಗಿದೆ. 5 ಸಾವಿರ ಜನರಿಗೆ ಸಸ್ಯಾಹಾರಿ ಊಟಕ್ಕೆ ವ್ಯವಸ್ಥೆ ನಡೆಸಲಾಗುತ್ತಿದೆ. ಒಟ್ಟು 25 ಸಾವಿರ ಜನಕ್ಕೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಊಟದ ಸಂದರ್ಭದಲ್ಲಿ ನೂಕುನುಗ್ಗಲು ಆಗದಿರಲಿ ಎನ್ನುವ ಕಾರಣಕ್ಕೆ ಅರಮನೆ ಮೈದಾನದ ಸುತ್ತಮುತ್ತ ಪೊಲೀಸ್​ ಬಂದೋಬಸ್ತ್ ನಿಯೋಜಿಸಲಾಗುತ್ತಿದೆ.

ಇದನ್ನೂ ಓದಿ: ಪುನೀತ್​ ರಾಜ್​ಕುಮಾರ್​ಗೆ ನಮನ ಸಲ್ಲಿಸಿದ ರಾಮ್​ ಚರಣ್, ವಿಜಯ್​ ಸೇತುಪತಿ​

ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಪೂಜೆ ಸಲ್ಲಿಸಿ, ಗಳಗಳನೆ ಅತ್ತ ಕಾಲಿವುಡ್​ ನಟ ಸಿದ್ದಾರ್ಥ್​