AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆಯ ಪ್ರಚಾರದಲ್ಲಿ ಭಾಗಿ ಆಗಲಿದ್ದಾರೆ ಅಶ್ವಿನಿ ಪುನೀತ್​ ರಾಜ್​ಕುಮಾರ್?

ಲೋಕಸಭೆ ಚುನಾವಣೆಯ ಪ್ರಚಾರದಲ್ಲಿ ಭಾಗಿ ಆಗಲಿದ್ದಾರೆ ಅಶ್ವಿನಿ ಪುನೀತ್​ ರಾಜ್​ಕುಮಾರ್?

ರಾಜೇಶ್ ದುಗ್ಗುಮನೆ
|

Updated on: Mar 20, 2024 | 8:10 AM

Share

ನಟ ಪುನೀತ್ ರಾಜ್​ಕುಮಾರ್ ಅವರು ರಾಜಕೀಯದಿಂದ ಸದಾ ದೂರವೇ ಇದ್ದವರು. ರಾಜ್​ಕುಮಾರ್ ಕೂಡ ಅಷ್ಟೇ. ಈಗ ಗೀತಾ ಶಿವರಾಜ್​ಕುಮಾರ್ ಅವರು ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಶಿವರಾಜ್​ಕುಮಾರ್ ಅವರು ಪತ್ನಿ ಪರವಾಗಿ ಪ್ರಚಾರ ಮಾಡಲಿದ್ದಾರೆ.

ನಟ ಪುನೀತ್ ರಾಜ್​ಕುಮಾರ್ ಅವರು ರಾಜಕೀಯದಿಂದ ಸದಾ ದೂರವೇ ಇದ್ದವರು. ರಾಜ್​ಕುಮಾರ್ ಕೂಡ ಅಷ್ಟೇ. ಈಗ ಗೀತಾ ಶಿವರಾಜ್​ಕುಮಾರ್ (Geetha Shivarajkumar) ಅವರು ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಶಿವರಾಜ್​ಕುಮಾರ್ ಅವರು ಪತ್ನಿ ಪರವಾಗಿ ಪ್ರಚಾರ ಮಾಡಲಿದ್ದಾರೆ. ಈ ಮಧ್ಯೆ ಪುನೀತ್ ಪತ್ನಿ ಅಶ್ವಿನಿ ಕೂಡ ಈ ಬಾರಿ ಚುನಾವಣೆ ಪ್ರಚಾರದಲ್ಲಿ ಭಾಗಿ ಆಗಲಿದ್ದಾರೆಯೇ ಎನ್ನುವ ಪ್ರಶ್ನೆ ಮೂಡಿದೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಸದಾಶಿವನಗರದಲ್ಲಿರುವ ಪುನೀತ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಅಶ್ವಿನಿ ಪುನೀತ್ ರಾಜ್​ಕುಮಾರ್ ಜೊತೆ ಮಾತುಕತೆ ನಡೆಸಿದ್ದಾರೆ. ತಮ್ಮನ್ನು ಬೆಂಬಲಿಸುವಂತೆ ಅವರು ಕೋರಿದ್ದಾರೆ ಎನ್ನಲಾಗಿದೆ. ಮಲ್ಲೇಶ್ವರ ಶಾಸಕ ಡಾ.ಅಶ್ವತ್ಥ್ ನಾರಾಯಣ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More