Gandhada Gudi: ವಿಶೇಷಚೇತನ ಮಕ್ಕಳಿಗೆ ‘ಗಂಧದ ಗುಡಿ’ ಪ್ರದರ್ಶನ; ಸಹಾಯಕರ ನೆರವಿನಿಂದ ಸಾರಾಂಶ ತಿಳಿದ ಮಕ್ಕಳು
ಬೆಂಗಳೂರಿನ ಪ್ರಸನ್ನ ಚಿತ್ರಮಂದಿರದಲ್ಲಿ ವಿಶೇಷಚೇತನ ಮಕ್ಕಳಿಗಾಗಿ ಪ್ರದರ್ಶನ ಏರ್ಪಡಿಸಲಾಗಿತ್ತು. ಸಹಾಯಕರ ನೆರವಿನಿಂದ 400ಕ್ಕೂ ಹೆಚ್ಚು ಮಕ್ಕಳು ‘ಗಂಧದ ಗುಡಿ’ ಚಿತ್ರದ ಸಾರಾಂಶವನ್ನು ತಿಳಿದುಕೊಂಡರು.
ಕರ್ನಾಟಕದ ಪ್ರಕೃತಿ ಸೌಂದರ್ಯವನ್ನು ಸಾರುವ ‘ಗಂಧದ ಗುಡಿ’ ಸಾಕ್ಷ್ಯಚಿತ್ರವನ್ನು ಎಲ್ಲರೂ ನೋಡಬೇಕು ಎಂಬುದು ಪುನೀತ್ ರಾಜ್ಕುಮಾರ್ (Puneeth Rajkumar) ಅವರ ಆಸೆ ಆಗಿತ್ತು. ಅದರಲ್ಲೂ ವಿಶೇಷವಾಗಿ ಮಕ್ಕಳು ಈ ಚಿತ್ರವನ್ನು ವೀಕ್ಷಿಸಬೇಕು ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಬೆಂಗಳೂರಿನ ಪ್ರಸನ್ನ ಚಿತ್ರಮಂದಿರದಲ್ಲಿ ವಿಶೇಷಚೇತನ ಮಕ್ಕಳಿಗಾಗಿ (Special children) ಉಚಿತ ಪ್ರದರ್ಶನ ಏರ್ಪಡಿಸಲಾಗಿತ್ತು. 400ಕ್ಕೂ ಹೆಚ್ಚು ಮಕ್ಕಳಿಗೆ ಅವಕಾಶ ಕಲ್ಪಿಸಲಾಗಿತ್ತು. ಸಹಾಯಕರ ನೆರವಿನಿಂದ ಈ ಮಕ್ಕಳು ‘ಗಂಧದ ಗುಡಿ’ (Gandhada Gudi) ಸಾಕ್ಷ್ಯಚಿತ್ರದ ಸಾರಾಂಶವನ್ನು ತಿಳಿದುಕೊಂಡಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos