9 ಗಂಟೆ ಕಾರ್ಯಾಚರಣೆ ಬಳಿಕ ಕೊನೆಗೂ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!

Updated on: May 16, 2026 | 7:18 PM

ಪಂಜಾಬ್‌ನಲ್ಲಿ 9 ಗಂಟೆಗಳ ಕಾರ್ಯಾಚರಣೆಯ ನಂತರ 4 ವರ್ಷದ ಬಾಲಕನನ್ನು ಬೋರ್‌ವೆಲ್‌ನಿಂದ ಯಶಸ್ವಿಯಾಗಿ ರಕ್ಷಿಸಲಾಗಿದೆ. ಹೊಶಿಯಾರ್‌ಪುರ-ದಾಸುಯಾ ರಸ್ತೆಯ ಭಿಖೋವಾಲ್ ಬಳಿಯ ಚಕ್ ಸಮಾನಾ ಗ್ರಾಮದ 4 ವರ್ಷದ ಮಗು ಬೋರ್​​ವೆಲ್​ ಬಾವಿಯೊಳಗೆ ಬಿದ್ದಿದ್ದ. 9 ಗಂಟೆಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಿದ ಎನ್​ಡಿಆರ್​ಎಫ್​ ಸಿಬ್ಬಂದಿ ಆತನನ್ನು ಸುರಕ್ಷಿತವಾಗಿ ಹೊರಗೆ ತಂದಿದ್ದಾರೆ.

ನವದೆಹಲಿ, ಮೇ 16: ಪಂಜಾಬ್‌ನ ಹೋಶಿಯಾರ್‌ಪುರ ಜಿಲ್ಲೆಯಲ್ಲಿ 4 ವರ್ಷದ ಬಾಲಕ ಬೋರ್‌ವೆಲ್‌ಗೆ (borewell) ಬಿದ್ದಿದ್ದ. ಮಗು ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಹೊಸದಾಗಿ ಕೊರೆದ ಬೋರ್‌ವೆಲ್‌ಗೆ ಬಿದ್ದಿದ್ದಾನೆ ಎಂದು ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಘಟನೆ ಶುಕ್ರವಾರ ರಾತ್ರಿ ನಡೆದಿತ್ತು. ಹೊಶಿಯಾರ್‌ಪುರ-ದಾಸುಯಾ ರಸ್ತೆಯ ಭಿಖೋವಾಲ್ ಬಳಿಯ ಚಕ್ ಸಮಾನಾ ಗ್ರಾಮದ 4 ವರ್ಷದ ಮಗು ಬೋರ್​​ವೆಲ್​ ಬಾವಿಯೊಳಗೆ ಬಿದ್ದಿದ್ದ. 9 ಗಂಟೆಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಿದ ಎನ್​ಡಿಆರ್​ಎಫ್​ ಸಿಬ್ಬಂದಿ ಆತನನ್ನು ಸುರಕ್ಷಿತವಾಗಿ ಹೊರಗೆ ತಂದಿದ್ದಾರೆ.

ಗುರ್ಕರನ್ ಸಿಂಗ್ ಎಂಬ ಬಾಲಕ ಶುಕ್ರವಾರ ಸಂಜೆ ಬೋರ್‌ವೆಲ್‌ಗೆ ಬಿದ್ದಿದ್ದ. ಆತ 30 ಅಡಿ ಆಳದಲ್ಲಿ ಸಿಲುಕಿದ್ದ. ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮತ್ತು ಸ್ಥಳೀಯರನ್ನು ಒಳಗೊಂಡ ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯ ಪ್ರಾರಂಭಿಸಿದವು. ಮಧ್ಯರಾತ್ರಿ ಆ ಮಗುವನ್ನು ಹೊರತೆಗೆಯುವಲ್ಲಿ ಅವರು ಯಶಸ್ವಿಯಾದರು. ಬಾಲಕನನ್ನು ಆ್ಯಂಬುಲೆನ್ಸ್​​ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಗುತ್ತಿದೆ. ಆತನ ಆರೋಗ್ಯ ಸ್ಥಿರವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us