IPL 2025 Qualifier 1: ಆರ್​ಸಿಬಿ ಬೌಲರ್​ಗಳ ದಾಳಿಗೆ ಪತರುಗುಟ್ಟಿದ ಪಂಜಾಬ್; ವಿಡಿಯೋ ನೋಡಿ

Updated on: May 29, 2025 | 8:57 PM

IPL 2025 Qualifier 1: ಐಪಿಎಲ್ 2025ರ ಕ್ವಾಲಿಫೈಯರ್ 1ರಲ್ಲಿ ಆರ್ಸಿಬಿ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಭಾರೀ ಸೋಲಿನತ್ತ ಸಾಗುತ್ತಿದೆ. 8 ವಿಕೆಟ್‌ಗಳು ಕಳೆದುಕೊಂಡು 100 ರನ್‌ಗಳನ್ನೂ ದಾಟಿಲ್ಲ. ಆರ್ಸಿಬಿ ಬೌಲರ್‌ಗಳು ಅದ್ಭುತವಾಗಿ ಬೌಲಿಂಗ್ ಮಾಡಿ ಪಂಜಾಬ್‌ನ ಇನ್ನಿಂಗ್ಸ್‌ ಅನ್ನು ನಿಯಂತ್ರಿಸಿದ್ದಾರೆ. ಪಂಜಾಬ್‌ನ ಆರಂಭಿಕ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ನಿರಾಶೆಗೊಳಿಸಿದ್ದಾರೆ.

ಆರ್​ಸಿಬಿ ವಿರುದ್ಧ ಐಪಿಎಲ್ 2025 ರ ಕ್ವಾಲಿಫೈಯರ್ 1 ಆಡುತ್ತಿರುವ ಪಂಜಾಬ್ ಕಿಂಗ್ಸ್ ತಂಡ ಸಂಕಷ್ಟಕ್ಕೆ ಸಿಲುಕಿದೆ. ತಂಡ ಈಗಾಗಲೇ 8 ವಿಕೆಟ್‌ಗಳನ್ನು ಕಳೆದುಕೊಂಡಿದ್ದು, 100 ರನ್​ಗಳನ್ನು ಸಹ ದಾಟಿಲ್ಲ. ಈ ಪಂದ್ಯದಲ್ಲಿ ಆರ್‌ಸಿಬಿ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿದ್ದು, ಪಂಜಾಬ್‌ ಇನ್ನಿಂಗ್ಸ್ ಅನ್ನು ಸಂಪೂರ್ಣವಾಗಿ ನಿಯಂತ್ರದಲಿಟ್ಟುಕೊಂಡಿದ್ದಾರೆ. ಈ ಮಹತ್ವದ ಪಂದ್ಯದಲ್ಲಿ, ಪಂಜಾಬ್‌ನ ಆರಂಭಿಕ ಆಟಗಾರರಾಗಲಿ ಅಥವಾ ಮಧ್ಯಮ ಕ್ರಮಾಂಕವಾಗಲಿ ಪರಿಣಾಮ ಬೀರಲು ಸಾಧ್ಯವಾಗಲಿಲ್ಲ. ನಾಯಕ ಶ್ರೇಯಸ್ ಅಯ್ಯರ್ ಕೂಡ ಕೇವಲ ಎರಡು ರನ್‌ಗಳನ್ನು ಗಳಿಸಲು ಸಾಧ್ಯವಾಗಲಿಲ್ಲ.

Loading...
Unable to load recommendations.
Follow Us
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More