PM Modi at 75: ಮರಳು ಕಲಾಕೃತಿ ರಚಿಸಿ ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಶುಭ ಕೋರಿದ ಕಲಾವಿದ ಸುದರ್ಶನ್ ಪಟ್ನಾಯಕ್

ಪ್ರಧಾನಿ ನರೇಂದ್ರ ಮೋದಿ ಇಂದು 75ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ.  ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು, ಪುರಿಯಲ್ಲಿ ಪ್ರಧಾನಿ ಮೋದಿಯವರ ಕಲಾಕೃತಿಯನ್ನು ಮರಳಿನಲ್ಲಿ ರಚಿಸಿ ಅವರ ಹುಟ್ಟುಹಬ್ಬಕ್ಕೆ ವಿಶೇಷವಾಗಿ ಶುಭಕೋರಿದ್ದಾರೆ. ಪ್ರಧಾನಿ ಮೋದಿ 1950 ರ ಸೆಪ್ಟೆಂಬರ್ 17 ರಂದು ಗುಜರಾತ್‌ನ ಸಣ್ಣ ಪಟ್ಟಣವಾದ ವಡ್ನಗರದಲ್ಲಿ ಜನಿಸಿದರು. ಅವರ ಬಾಲ್ಯವು ತೀವ್ರ ಬಡತನದಲ್ಲಿ ಕಳೆದಿತು. ಅವರು ತಮ್ಮ ತಂದೆ ದಾಮೋದರದಾಸ್ ಮುಲ್ಚಂದ್ ಮೋದಿ ಅವರೊಂದಿಗೆ ವಡ್ನಗರ ರೈಲ್ವೆ ನಿಲ್ದಾಣದಲ್ಲಿ ಚಹಾ ಮಾರಾಟ ಮಾಡುತ್ತಿದ್ದರು. ಅವರ ತಾಯಿ ಹೀರಾಬೆನ್ ಒಬ್ಬ ಸಾಮಾನ್ಯ ಗೃಹಿಣಿ. ಒಟ್ಟು ನಾಲ್ಕು ಮಕ್ಕಳಲ್ಲಿ ಪ್ರಧಾನಿ ಮೋದಿ ಮೂರನೇಯವರು.

ಪುರಿ, ಸೆಪ್ಟೆಂಬರ್ 17: ಪ್ರಧಾನಿ ನರೇಂದ್ರ ಮೋದಿ ಇಂದು 75ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ.  ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು, ಪುರಿಯಲ್ಲಿ ಪ್ರಧಾನಿ ಮೋದಿಯವರ ಕಲಾಕೃತಿಯನ್ನು ಮರಳಿನಲ್ಲಿ ರಚಿಸಿ ಅವರ ಹುಟ್ಟುಹಬ್ಬಕ್ಕೆ ವಿಶೇಷವಾಗಿ ಶುಭಕೋರಿದ್ದಾರೆ. ಪ್ರಧಾನಿ ಮೋದಿ 1950 ರ ಸೆಪ್ಟೆಂಬರ್ 17 ರಂದು ಗುಜರಾತ್‌ನ ಸಣ್ಣ ಪಟ್ಟಣವಾದ ವಡ್ನಗರದಲ್ಲಿ ಜನಿಸಿದರು. ಅವರ ಬಾಲ್ಯವು ತೀವ್ರ ಬಡತನದಲ್ಲಿ ಕಳೆದಿತು. ಅವರು ತಮ್ಮ ತಂದೆ ದಾಮೋದರದಾಸ್ ಮುಲ್ಚಂದ್ ಮೋದಿ ಅವರೊಂದಿಗೆ ವಡ್ನಗರ ರೈಲ್ವೆ ನಿಲ್ದಾಣದಲ್ಲಿ ಚಹಾ ಮಾರಾಟ ಮಾಡುತ್ತಿದ್ದರು. ಅವರ ತಾಯಿ ಹೀರಾಬೆನ್ ಒಬ್ಬ ಸಾಮಾನ್ಯ ಗೃಹಿಣಿ. ಒಟ್ಟು ನಾಲ್ಕು ಮಕ್ಕಳಲ್ಲಿ ಪ್ರಧಾನಿ ಮೋದಿ ಮೂರನೇಯವರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:08 am, Wed, 17 September 25