Pushpa 2 Press Meet Live:ಭಾರಿ ಗೆಲುವು ಕೊಟ್ಟ ಅಭಿಮಾನಿಗಳಿಗೆ ‘ಪುಷ್ಪ’ರಾಜ್ ಧನ್ಯವಾದ

Pushpa 2 Press Meet Live:ಭಾರಿ ಗೆಲುವು ಕೊಟ್ಟ ಅಭಿಮಾನಿಗಳಿಗೆ ‘ಪುಷ್ಪ’ರಾಜ್ ಧನ್ಯವಾದ

ಮಂಜುನಾಥ ಸಿ.
|

Updated on:Dec 12, 2024 | 3:21 PM

Pushpa 2: ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ನಟಿಸಿ ಸುಕುಮಾರ್ ನಿರ್ದೇಶನ ಮಾಡಿರುವ ‘ಪುಷ್ಪ 2’ ಸಿನಿಮಾ ಭಾರಿ ಯಶಸ್ಸು ಗಳಿಸಿದೆ. ಕೇವಲ ನಾಲ್ಕೇ ದಿನಕ್ಕೆ ಬಾಕ್ಸ್ ಆಫೀಸ್​ನಲ್ಲಿ 1000 ಕೋಟಿಗೂ ಹೆಚ್ಚು ಹಣ ಗಳಿಕೆ ಮಾಡಿದೆ. ‘ಪುಷ್ಪ 2’ ಸಿನಿಮಾವನ್ನು ಗೆಲ್ಲಿಸಿದ ಅಭಿಮಾನಿಗಳಿಗೆ ಧನ್ಯವಾದ ಹೇಳಲು ಪತ್ರಿಕಾಗೋಷ್ಠಿಯನ್ನು ಆಯೋಜಿಸಿದ್ದು, ಕಾರ್ಯಕ್ರಮದ ಲೈವ್ ಇಲ್ಲಿ ವೀಕ್ಷಿಸಿ.

ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ 2’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಆಗಿದೆ. ಕೇವಲ ನಾಲ್ಕೇ ದಿನಗಳಲ್ಲಿ ಈ ಸಿನಿಮಾ ನೂರು ಕೋಟಿ ಕಲೆಕ್ಷನ್ ದಾಟಿದೆ. ವಿಶ್ವದಾದ್ಯಂತ ಲಕ್ಷಾಂತರ ಮಂದಿ ಸಿನಿಮಾ ವೀಕ್ಷಿಸಿದ್ದು, ಹಲವು ದಾಖಲೆಗಳನ್ನು ಮುರಿದಿದೆ ‘ಪುಷ್ಪ 2’. ಇದೀಗ ‘ಪುಷ್ಪ 2’ ತಂಡ ಅದ್ಧೂರಿ ಸಕ್ಸಸ್ ಮೀಟ್ ಆಯೋಜನೆ ಮಾಡಿದ್ದು, ದೆಹಲಿಯಲ್ಲಿ ಅದ್ಧೂರಿಯಾಗಿ ಸಕ್ಸಸ್ ಪಾರ್ಟಿ ನಡೆಯುತ್ತಿದೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ನಿರ್ದೇಶಕ ಸುಕುಮಾರ್ ಸೇರಿದಂತೆ ಚಿತ್ರತಂಡದ ಕೆಲ ಪ್ರಮುಖರು ಈ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದಾರೆ. ಕಾರ್ಯಕ್ರಮದ ಲೈವ್ ಇಲ್ಲಿ ನೋಡಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Dec 12, 2024 02:10 PM