ರಾಷ್ಟ್ರ ಪ್ರಶಸ್ತಿ ಸ್ವೀಕರಿಸಲು ದೆಹಲಿಗೆ ಹೋಗಿ ‘ತಗ್ಗೆದೆಲೆ..’ ಡೈಲಾಗ್​ ಹೊಡೆದ ಅಲ್ಲು ಅರ್ಜುನ್​; ವಿಡಿಯೋ ನೋಡಿ

Updated on: Oct 17, 2023 | 3:17 PM

ನಟ ಅಲ್ಲು ಅರ್ಜುಜ್​ ಅವರು ರಾಷ್ಟ್ರ ಪ್ರಶಸ್ತಿ ಸ್ವೀಕರಿಸಲು ಇಂದು (ಅಕ್ಟೋಬರ್​ 17) ದೆಹಲಿಗೆ ತೆರಳಿದ್ದಾರೆ. ಪ್ರಶಸ್ತ್ರಿ ಪ್ರದಾನ ಸಮಾರಂಭ ಆರಂಭ ಆಗುವುದಕ್ಕೂ ಮುನ್ನ ಅವರು ಮಾಧ್ಯಮದ ಜತೆ ಮಾತನಾಡಿದ್ದಾರೆ. ಕಮರ್ಷಿಯಲ್​ ಚಿತ್ರದಲ್ಲಿನ ಅಭಿನಯಕ್ಕೆ ರಾಷ್ಟ್ರ ಪ್ರಶಸ್ತಿ ಬಂದಿರುವುದು ದುಪ್ಪಟ್ಟು ಖುಷಿ ನೀಡಿದೆ ಎಂದು ಅವರು ಹೇಳಿದ್ದಾರೆ.

ಟಾಲಿವುಡ್​ ನಟ ಅಲ್ಲು ಅರ್ಜುನ್​ ಅವರು ‘ಪುಷ್ಪ’ (Pushpa Movie) ಸಿನಿಮಾದಲ್ಲಿನ ನಟನೆಗೆ ‘ರಾಷ್ಟ್ರ ಪ್ರಶಸ್ತಿ’ ಪಡೆದಿದ್ದಾರೆ. ಪ್ರಶಸ್ತಿ ಸ್ವೀಕರಿಸಲು ಅವರು ಇಂದು (ಅಕ್ಟೋಬರ್​ 17) ದೆಹಲಿಗೆ ತೆರಳಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭ ಆರಂಭ ಆಗುವುದಕ್ಕೂ ಮುನ್ನ ಅವರು ಡಿಡಿ ನ್ಯಾಷನಲ್​ ವಾಹಿನಿ ಜೊತೆ ಮಾತನಾಡಿದ್ದಾರೆ. ತಮ್ಮ ಕಮರ್ಷಿಯಲ್​ ಸಿನಿಮಾದಲ್ಲಿನ ಅಭಿನಯಕ್ಕೆ ರಾಷ್ಟ್ರ ಪ್ರಶಸ್ತಿ (National Film Award) ಬಂದಿರುವುದು ದುಪ್ಪಟ್ಟು ಖುಷಿ ನೀಡಿದೆ ಎಂದು ಅರ್ಜುನ್​ ಅವರು ಹೇಳಿದ್ದಾರೆ. ಇದೇ ವೇಳೆ ಅವರು ‘ತಗ್ಗೆದೆಲೆ..’ ಎಂದು ಡೈಲಾಗ್​ ಹೊಡೆದಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ನ್ಯಾಷನಲ್​ ಅವಾರ್ಡ್​ ಪಡೆಯುತ್ತಿರುವ ಅಲ್ಲು ಅರ್ಜುನ್​ (Allu Arjun) ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published on: Oct 17, 2023 03:16 PM
Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More