ಕನ್ನಡ ಸಿನಿಮಾಗಳ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ‘ಪುಷ್ಪ’ ಚಿತ್ರದ ಸಂಗೀತ ನಿರ್ದೇಶಕ
ಕನ್ನಡ ಚಿತ್ರರಂಗದವರು ಮಾಡಿರುವ ಸಾಧನೆ ಅಪಾರ. ಅದರಲ್ಲೂ ಇತ್ತೀಚೆಗೆ ಚಿತ್ರರಂಗದ ದಿಕ್ಕನ್ನು ಬದಲಾಯಿಸುವ ಕೆಲಸ ಆಗುತ್ತಿದೆ. ಈಗ ಕನ್ನಡ ಸಿನಿಮಾಗಳ ಬಗ್ಗೆ ‘ಪುಷ್ಪ’ ಚಿತ್ರದ ಸಂಗೀತ ಸಂಯೋಜಕ ದೇವಿ ಶ್ರೀ ಪ್ರಸಾದ್ ಅವರು ಮಾತನಾಡಿದ್ದಾರೆ. ಅವರು ಏನು ಹೇಳಿದರು ಎನ್ನುವ ಬಗ್ಗೆ ಇಲ್ಲಿದೆ ವಿಡಿಯೋ.
‘ಪುಷ್ಪ’ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿ ಖ್ಯಾತಿ ಗಳಿಸಿದ ದೇವಿಶ್ರೀ ಪ್ರಸಾದ್ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಈ ವೇಳೆ ಕನ್ನಡ ಸಿನಿಮಾಗಳ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ‘ಕನ್ನಡದ ಕಲಾವಿದರು, ತಂತ್ರಜ್ಞರು ಟಾಲಿವುಡ್ ಜೊತೆ ಒಳ್ಳೆಯ ನಂಟು ಹೊಂದಿದ್ದಾರೆ ಅನ್ನೋದು ಖುಷಿಯ ವಿಚಾರ. ಕನ್ನಡದ ಕಾಂತಾರ, ಕೆಜಿಎಫ್ ಸಿನಿಮಾಗಳು ವಿಶ್ವಾದ್ಯಂತ ಸದ್ದು ಮಾಡುತ್ತಿವೆ. ಈಗ ಯಾವುದೇ ಬೌಂಡರಿ ಇಲ್ಲ. ಎಲ್ಲವೂ ಇಂಡಿಯನ್ ಸಿನಿಮಾ’ ಎಂದಿದ್ದಾರೆ ಅವರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos