ಪ್ರಧಾನಿ ಮೋದಿ ಧರ್ಮ ಕಾರ್ಯಕ್ಕೆ ಶ್ಲಾಘನೆ: ವಿಶೇಷ ಬಿರುದು ನೀಡಿದ ಪುತ್ತಿಗೆ ಶ್ರೀಗಳು

Updated on: Nov 28, 2025 | 1:36 PM

ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಸಂಸ್ಕೃತದಲ್ಲಿ ಪ್ರಧಾನಿ ಮೋದಿಯನ್ನು ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಡಿ ಹೊಗಳಿದ್ದಾರೆ. ಅಯೋಧ್ಯೆ ರಾಮಮಂದಿರ ಕಾರ್ಯದ ಬಗ್ಗೆ ಉಲ್ಲೇಖಿಸಿ ಧರ್ಮ ರಕ್ಷಣೆಗೆ ನರೇಂದ್ರ ಮೋದಿಯವರ ಕೊಡುಗೆ ಅಪಾರ ಇದೆ ಎಂದು ಶ್ಲಾಘಿಸಿದ್ದಾರೆ. ಜೊತೆಗೆ ಪ್ರಧಾನಿ ಮೋದಿಗೆ ಭಾರತ ಭಾಗ್ಯವಿದಾತ ಬಿರುದನ್ನು ಶ್ರೀಗಳು ಸಮರ್ಪಿಸಿದ್ದಾರೆ.

ಉಡುಪಿ, ನವೆಂಬರ್​​ 28: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ನಡೆದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಗಿಯಾಗಿದ್ದಾರೆ. ಈ ವೇಳೆ ಕಾರ್ಯಕ್ರಮದಲ್ಲಿ ಪರ್ಯಾಯ ಮಠಾಧೀಶರಾದ ಪುತ್ತಿಗೆ ಮಠದ ಶ್ರೀಗಳು ಸಂಸ್ಕೃತದಲ್ಲಿ ಮೋದಿ ಅರನ್ನು ಹಾಡಿ ಹೊಗಳಿದ್ದಾರೆ. ಅಯೋಧ್ಯೆ ರಾಮಮಂದಿರ ಕಾರ್ಯದ ಬಗ್ಗೆ ಉಲ್ಲೇಖಿಸಿದ ಸ್ವಾಮೀಜಿ, ಧರ್ಮ ರಕ್ಷಣೆಗೆ ನರೇಂದ್ರ ಮೋದಿಯವರ ಕೊಡುಗೆ ಅಪಾರ ಇದೆ ಎಂದು ಶ್ಲಾಘಿಸಿದ್ದಾರೆ. ಅಲ್ಲದೆ, ಪ್ರಧಾನಿ ಮೋದಿಗೆ ‘ಭಾರತ ಭಾಗ್ಯವಿದಾತ’ ಬಿರುದು ಸಮರ್ಪಣೆ ಮಾಡಿದ್ದಾರೆ. ರಾಷ್ಟ್ರ ರಕ್ಷಾ ಕವಚ, ಶ್ರೀಕೃಷ್ಣನ ಫೋಟೋ ನೀಡಿ ಪ್ರಧಾನಿಯನ್ನ ಸನ್ಮಾನಿಸಿದ್ದಾರೆ.

ಪ್ರಧಾನಿ ಮೋದಿ ಜೊತೆಗೆ ವೇದಿಕೆಯಲ್ಲಿ ರಾಜ್ಯಪಾಲ ಗೆಹ್ಲೋಟ್, ಸುಗುಣೇಂದ್ರ ತೀರ್ಥ ಶ್ರೀಗಳು, ಸುಶಿರೀಂದ್ರ ತೀರ್ಥ ಸ್ವಾಮೀಜಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಭೈರತಿ ಸುರೇಶ್, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಬಿ.ವೈ.ರಾಘವೇಂದ್ರ, ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ, ಬಿ.ವೈ.ವಿಜಯೇಂದ್ರ, ಶಾಸಕರಾದ ವಿ.ಸುನೀಲ್ ಕುಮಾರ್, ಯಶಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್, ಗುರುರಾಜ್ ಗಂಟಿಹೊಳೆ ಉಪಸ್ಥಿತರಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Nov 28, 2025 01:35 PM
Loading...
Unable to load recommendations.
Follow Us