ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್, ಎಸ್‌ಪಿ ಹೇಳಿದ್ದೇನು ನೋಡಿ
ಪುತ್ತೂರು ಬಂದ್ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪರಿಸ್ಥಿತಿ ಶಾಂತಿಯುತವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ದಕ್ಷಿಣ ಕನ್ನಡ ಎಸ್‌ಪಿ ತಿಳಿಸಿದ್ದಾರೆ. ದರ್ಬೆ ಡಿಜಿಟಲ್ ಸೇವಾ ಕೇಂದ್ರದ ಗಲಾಟೆ ಪ್ರಕರಣದ ಕುರಿತು ಕಾನೂನುಬದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಪುತ್ತೂರು, ಆಗಸ್ಟ್ 25: ಪುತ್ತೂರು ಬಂದ್ ಹಿನ್ನೆಲೆಯಲ್ಲಿ ನಗರಕ್ಕೆ ಭೇಟಿ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಪರಿಸ್ಥಿತಿಯನ್ನು ಅವಲೋಕಿಸಿದರು. ಬಳಿಕ ಮಾತನಾಡಿ, ಈದ್ ಮಿಲಾದ್ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಡಿಎಸ್‌ಪಿ, ಮೂವರು ಸಿಪಿಐಗಳು, ಐದು ಕೆಎಸ್‌ಆರ್‌ಪಿ, ಒಂದು ಎಸ್‌ಎಎಫ್ ಹಾಗೂ ಮೂರು ಡಿಎಆರ್ ತಂಡಗಳನ್ನು ನಿಯೋಜಿಸಲಾಗಿದೆ. ಜಿಲ್ಲಾದ್ಯಂತ ಪ್ರಾರ್ಥನೆ, ಮೆರವಣಿಗೆಗಳು ಶಾಂತಿಯುತವಾಗಿ ನಡೆದಿದ್ದು, ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ ಎಂದು ತಿಳಿಸಿದರು. ದರ್ಬೆ ಡಿಜಿಟಲ್ ಸೇವಾ ಕೇಂದ್ರದ ಗಲಾಟೆ ಪ್ರಕರಣದ ಬಗ್ಗೆ ಕಾನೂನುಬದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಎಸ್‌ಪಿ ತಿಳಿಸಿದ್ದಾರೆ.
ಬೆಳಗಿನ ಪ್ರಾರ್ಥನೆಗಳು ಹಾಗೂ ಮೆರವಣಿಗೆಗಳು ಜಿಲ್ಲಾದ್ಯಂತ ಶಾಂತಿಯುತವಾಗಿ ಪೂರ್ಣಗೊಂಡಿದ್ದು, ಸಂಜೆ ಪುತ್ತೂರಿನಲ್ಲಿ ನಡೆಯುವ ಮೆರವಣಿಗೆಗೂ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಪ್ರಸ್ತುತ ಪರಿಸ್ಥಿತಿ ಶಾಂತಿಯುತವಾಗಿದ್ದು, ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ಎಸ್‌ಪಿ ಸ್ಪಷ್ಟಪಡಿಸಿದರು. ಬಂದ್ ಕರೆ ನೀಡಲಾಗಿದ್ದರೂ, ಬಲವಂತದ ಬಂದ್ ಎಲ್ಲಿಯೂ ಕಂಡುಬಂದಿಲ್ಲ. ರಜಾ ದಿನಗಳಂದು ಅಂಗಡಿಗಳು ಮುಚ್ಚುವ ರೀತಿಯಲ್ಲಿ ವ್ಯಾಪಾರ ವಹಿವಾಟುಗಳು ನಡೆದಿವೆ ಎಂದು ಅವರು ಹೇಳಿದರು. ದರ್ಬೆ ಡಿಜಿಟಲ್ ಸೇವಾ ಕೇಂದ್ರದಲ್ಲಿ ನಡೆದ ಘಟನೆ ಸಂಬಂಧ ಕಾನೂನು ರೀತ್ಯಾ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಪಿ ಭರವಸೆ ನೀಡಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

