ಪುತ್ತೂರು ಮಹಿಳಾ ಡಿಗ್ರಿ ಕಾಲೇಜಿನ ಅವ್ಯವಸ್ಥೆ ಬಗ್ಗೆ ಪ್ರಶ್ನಿಸಿದ್ದಕ್ಕೆ ಪ್ರಾಂಶುಪಾಲೆ ಸಸ್ಪೆಂಡ್

Edited By:

Updated on: Feb 26, 2026 | 8:13 PM

ಪುತ್ತೂರಿನ ಮಹಿಳಾ ಡಿಗ್ರಿ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ವೇದಶ್ರೀ ನಿಡ್ಯಾ ಅವರನ್ನು ಅಮಾನತು ಮಾಡಲಾಗಿದೆ. ಆಸ್ಪತ್ರೆ ಕಾಮಗಾರಿಯಿಂದ ಉಂಟಾದ ಧೂಳು, ಕಾಲೇಜಿನ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರ ಪ್ರತಿಭಟನೆಗೆ ಪ್ರೇರೇಪಿಸಿದ ಆರೋಪದಡಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಪ್ರತಿಭಟನೆ ಸಂದರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಜೊತೆ ಪ್ರಾಂಶುಪಾಲರ ವಾಗ್ವಾದದ ವಿಡಿಯೋ ವೈರಲ್ ಆಗಿತ್ತು.

ಮಂಗಳೂರು, ಫೆಬ್ರವರಿ 26: ವಿದ್ಯಾರ್ಥಿನಿಯರನ್ನ ಪ್ರತಿಭಟನೆ ಮಾಡಲು ಪ್ರೇರೇಪಿಸಿದ ಹಿನ್ನೆಲೆ ದಕ್ಷಿಣಕನ್ನಡ ಜಿಲ್ಲೆ ಪುತ್ತೂರಿನಲ್ಲಿರುವ ಮಹಿಳಾ ಡಿಗ್ರಿ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ವೇದಶ್ರೀ ನಿಡ್ಯಾರನ್ನು ಅಮಾನತು ಮಾಡಿ ಉನ್ನತ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿಯಿಂದ ಆದೇಶ ಹೊರಡಿಸಲಾಗಿದೆ. ತಾಲೂಕು ಸರ್ಕಾರಿ ಆಸ್ಪತ್ರೆ ಬಳಿಯೇ ಡಿಗ್ರಿ ಕಾಲೇಜು ಇದೆ. ಆಸ್ಪತ್ರೆ ಕಾಮಗಾರಿಯಿಂದಾಗಿ ತರಗತಿಯಲ್ಲಿ ಧೂಳು ಆಗುತ್ತಿತ್ತು. ಹೀಗಾಗಿ ಕಾಲೇಜಿನ ಅವ್ಯವಸ್ಥೆ ಖಂಡಿಸಿ ಕೆಲ‌ ದಿನಗಳ ಹಿಂದೆ ರಸ್ತೆ ತಡೆದು ವಿದ್ಯಾರ್ಥಿನಿಯರಿಂದ ಧರಣಿ ಮಾಡಲಾಗಿದೆ. ಕಾನೂನು ಉಲ್ಲಂಘನೆ, ಪ್ರತಿಭಟನೆಗೆ ಪ್ರೇರೇಪಣೆ ಆರೋಪದಡಿ ವೇದಶ್ರೀ ನಿಡ್ಯಾರನ್ನು ಅಮಾನತುಗೊಳಿಸಲಾಗಿದೆ. ಇನ್ನು ಸಮಸ್ಯೆ ನನಗೆ ಏಕೆ ಹೇಳಿಲ್ಲ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಕಿಡಿಕಾರಿದ್ದಾರೆ. ಪ್ರತಿಭಟನೆ ಸಮಯದಲ್ಲಿ ಸ್ಥಳಕ್ಕೆ ಆಗಮಿಸಿದ್ದ ವೇಳೆ ಶಾಸಕ ಮತ್ತು ಕಾಲೇಜು ಪ್ರಾಂಶುಪಾಲೆ ಮಧ್ಯೆ ವಾಗ್ವಾದ ಉಂಟಾಗಿದ್ದು, ಇಬ್ಬರ ವಾಗ್ವಾದದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More