ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

| Updated By: Ganapathi Sharma

Updated on: Sep 28, 2024 | 4:20 PM

ವೇಗವಾಗಿ ಬಂದ ಕಾರೊಂದು ಸ್ಥಳದಲ್ಲಿದ್ದವರು ನೋಡನೋಡುತ್ತಿದ್ದಂತೆಯೇ ಏಕಾಏಕಿ ರಸ್ತೆಯಿಂದ ಹೊರ ನುಗ್ಗಿದ್ದಲ್ಲದೆ ಪಲ್ಟಿಯಾದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪಘಾತ ಸಂಭವಿಸಿದೆ. ಘಟನೆ ಸಂಭವಿಸಿದ್ದೆಲ್ಲಿ? ಆಮೇಲೇನಾಯ್ತು ಎಂಬ ವಿವರ ಹಾಗೂ ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ.

ಮಂಗಳೂರು, ಸೆಪ್ಟೆಂಬರ್ 28: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಮ್ಮಾರ ಎಂಬಲ್ಲಿ ಶನಿವಾರ ಸಂಭವಿಸಿದೆ. ಉಪ್ಪಿನಂಗಡಿ-ಸುಬ್ರಹ್ಮಣ್ಯ ಸಂಪರ್ಕಿಸುವ ರಸ್ತೆಯಲ್ಲಿ ಸಂಭವಿಸಿದ ಅಪಘಾತದ ದೃಶ್ಯ ಸಿಸಿ‌ ಕ್ಯಾಮರಾದಲ್ಲಿ ಸೆರೆಯಾಗಿದೆ. ರಸ್ತೆ ಬದಿಯ ಪಕ್ಕದಲ್ಲೇ ಇರುವ ತಂಗುದಾಣ ಬಳಿ ಕಾರು ಮಗುಚಿ ಬಿದ್ದಿದೆ. ಬಸ್ ನಿಲ್ದಾಣದ ಬಳಿ ಹೆಚ್ಚಿನ‌ ಪ್ರಯಾಣಿಕರಿಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ.

ಉರುಳಿ ಬಿದ್ದ ಕಾರನ್ನು ಸ್ಥಳೀಯರು ತಕ್ಷಣವೇ ಮೇಲಕ್ಕೆತ್ತಿ ಚಾಲಕನನ್ನು ರಕ್ಷಿಸಿದ್ದಾರೆ. ಅದೃಷ್ಟವಶಾತ್, ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ